Advertisement

ದೇಶದಲ್ಲೇ ಮೊದಲು ಮೆದುಳು ಆರೋಗ್ಯ ಕಾರ್ಯಕ್ರಮ ರಾಜ್ಯದಲ್ಲಿ ಪ್ರಾಯೋಗಿಕ ಜಾರಿ

10:16 PM Jan 25, 2022 | Team Udayavani |

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ನಿಮ್ಹಾನ್ಸ್  ಸಂಸ್ಥೆಯು ಆರಂಭಿಸಿರುವ “ಕರ್ನಾಟಕ ಮೆದುಳು ಆರೋಗ್ಯ ಕಾರ್ಯಕ್ರಮ’ಕ್ಕೆ ಆರೋಗ್ಯ ಮತ್ತು ವೈದ್ಯ ಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಮಂಗಳವಾರ ಚಾಲನೆ ನೀಡಿದ್ದಾರೆ.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಡಾ| ಕೆ. ಸುಧಾಕರ್‌, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಮ್ಹಾನ್ಸ್ ನಿಂದ ಈ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾ ಗಿದೆ. ಮಾನಸಿಕ ರೋಗಿಗಳ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುವ ಬಗ್ಗೆ ವೈದ್ಯರಿಗೆ ತರಬೇತಿ ನೀಡಲಾಗುವುದು ಎಂದರು.

ಬಜೆಟ್‌ನಲ್ಲಿ ಅನುದಾನ
ಸಾಮಾಜಿಕ ಪರಿಸ್ಥಿತಿ, ಕೌಟುಂಬಿಕ ಸ್ಥಿತಿ ಮೊದಲಾದ ಕಾರಣಗಳಿಂದ ಅನೇಕರು ಮಾನಸಿಕ ಒತ್ತಡದಿಂದ ಬಳಲುತ್ತಿದ್ದಾರೆ. ಆದ್ದರಿಂದ ಹೆಚ್ಚು ಮಾನಸಿಕ ಆರೋಗ್ಯ ತಜ್ಞರು ಬೇಕಾಗಿದೆ. ರಾಜ್ಯದಲ್ಲಿ ಸುಮಾರು 2 ಲಕ್ಷ ಮಂದಿ ವೈದ್ಯ ಶಿಕ್ಷಣ ಪಡೆಯುತ್ತಿದ್ದಾರೆ. ಅವರನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರ ಕಂಡುಕೊಳ್ಳ ಬೇಕು. ಈ ಪ್ರಾಯೋಗಿಕ ಕಾರ್ಯ ಕ್ರಮವನ್ನು ಉತ್ತಮವಾಗಿ ಜಾರಿ ಮಾಡಿದರೆ ಮುಂದಿನ ಬಜೆಟ್‌ನಲ್ಲಿ ಈ ಕಾರ್ಯಕ್ರಮ ಕ್ಕಾಗಿ ಹೆಚ್ಚು ಅನುದಾನ ಮೀಸಲಿಡಬಹುದು ಎಂದರು.

ಇದನ್ನೂ ಓದಿ:ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಜ. 28: ವಿಷನ್‌ ವರದಿ ಬಿಡುಗಡೆ
ಮುಂದಿನ 20 ವರ್ಷಗಳಲ್ಲಿ ಕರ್ನಾಟಕ ಹೇಗೆ ಸ್ವಾಸ್ಥ್ಯ ರಾಜ್ಯ ವಾಗಬೇಕು ಹಾಗೂ ಮೂರು ಹಂತಗಳ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಹೇಗಾಗಬೇಕೆಂದು ಆರೋಗ್ಯ ಇಲಾಖೆಯಿಂದ ವಿಷನ್‌ ವರದಿ ರೂಪಿಸಲಾಗುತ್ತಿದೆ. ಸಮಿತಿ ಯಲ್ಲಿ 30 ಮಂದಿ ಹಿರಿಯ ತಜ್ಞರಿದ್ದಾರೆ. ಕಳೆದೊಂದು ವರ್ಷದಲ್ಲಿ ಸುಮಾರು 750 ತಜ್ಞರು ಇದರಲ್ಲಿ ಭಾಗಿಯಾಗಿದ್ದಾರೆ. ಜ. 28ಕ್ಕೆ ಮುಖ್ಯಮಂತ್ರಿಯವರು ವರದಿ ಬಿಡುಗಡೆ ಮಾಡುವರು ಎಂದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next