ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಶನಿವಾರ ರಾಜ್ಯಾದ್ಯಂತ ನಡೆದ ಮೊದಲ ದಿನದ ಸಿಇಟಿ-2023 ಪರೀಕ್ಷೆ ಸುಗಮವಾಗಿ ನಡೆದಿದೆ.
ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 2,61,610 ವಿದ್ಯಾರ್ಥಿಗಳ ಪೈಕಿ ಜೀವಶಾಸ್ತ್ರಕ್ಕೆ 2,00,457 (ಶೇ.82.53) ಹಾಗೂ ಗಣಿತಕ್ಕೆ 2,39,716 (ಶೇ.93.78) ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಬೆಂಗಳೂರಿನ 121 ಕೇಂದ್ರಗಳೂ ಸೇರಿ ರಾಜ್ಯದ 592 ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಿಗದಿತ ವೇಳಾಪಟ್ಟಿಯಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪರೀಕ್ಷೆ ಅವಧಿಗಿಂತ 2 ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಮುಂಜಾಗ್ರಜಾ ಕ್ರಮವಾಗಿ ಪರೀಕ್ಷಾ ಕೇಂದ್ರ ತಲುಪಿದ್ದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಶನಿವಾರ ರಾಜ್ಯಾದ್ಯಂತ ನಡೆದ ಮೊದಲ ದಿನದ ಸಿಇಟಿ-2023 ಪರೀಕ್ಷೆ ಸುಗಮವಾಗಿ ನಡೆದಿದೆ.