ಜೇವರ್ಗಿ: ಗ್ರಾಮೀಣ ಭಾಗದ ಹಿಂದುಳಿದ, ಅಲ್ಪಸಂಖ್ಯಾತ, ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿರಾಗಬಾರದು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯಾದ್ಯಂತ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ನೂರಾರು ವಸತಿ ನಿಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಡಾ|ಅಜಯಸಿಂಗ್ ಹೇಳಿದರು.
ಪಟ್ಟಣದ ದತ್ತನಗರ ಬಡಾವಣೆಯಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ 2019-20ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆಯಡಿ 3.24 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಕಟ್ಟಡ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.
ಪಟ್ಟಣದಲ್ಲಿ ಕಳೆದ ಕಾಂಗ್ರೆಸ್ ಸರ್ಕಾರದ ಅವ ಧಿಯಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಡ, ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ 5 ವಸತಿ ನಿಲಯಗಳನ್ನು ನಿರ್ಮಾಣ ಮಾಡಲಾಗಿದೆ. ಶಾಸಕರಾಗಿ ಆಯ್ಕೆಯಾದ ನಂತರ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಎಸ್ಸೆಸ್ಸೆಲ್ಸಿಯಲ್ಲಿ ಮಕ್ಕಳು ಗುಣಮಟ್ಟದ ಸಾಧನೆಗೆ„ಯಲು ಅಕ್ಷರ ಆವಿಷ್ಕಾರ ಯೋಜನೆ ಜಾರಿಗೆ ತಂದು ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಲಾಗಿದೆ. ತಾಲೂಕಿನಲ್ಲಿ 6 ಮೊರಾರ್ಜಿ ವಸತಿ ಶಾಲೆಗಳ ನಿರ್ಮಾಣ ಮಾಡಿ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸಲಾಗುತ್ತಿದೆ. ನೂತನ ವಸತಿ ನಿಲಯ ನಿರ್ಮಾಣಕ್ಕೂ ಮುಂಚೆ ಖಾಸಗಿ ಕಟ್ಟಡಗಳಲ್ಲಿ ವಿದ್ಯಾರ್ಥಿಗಳು ಹಲವಾರು ಸಮಸ್ಯೆಗಳ ನಡುವೆ ತೊಂದರೆ ಅನುಭವಿಸುವಂತಾಗಿತ್ತು. ಸರ್ಕಾರದ ಸೌಲಭ್ಯ ಪಡೆದುಕೊಂಡು ಉನ್ನತ ಶಿಕ್ಷಣ ಪಡೆದು ಹೆತ್ತವರ ಕನಸು ನನಸು ಮಾಡುವಂತೆ ಶಾಸಕ ಡಾ|ಅಜಯಸಿಂಗ್ ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ವಿಸ್ತೀರ್ಣಾಧಿಕಾರಿ ಮಹ್ಮದ್ ಯೂನೂಸ್, ಅಶೋಕ ನಾಯಕ, ಶಿವರಾಜ, ಜೇವರ್ಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಲಿಂಗರೆಡ್ಡಿ ಇಟಗಿ, ಯಡ್ರಾಮಿ ಬ್ಲಾಕ್‌ನ ರುಕುಂ ಪಟೇಲ ಇಜೇರಿ, ಮುಖಂಡರಾದ ರಾಜಶೇಖರ ಸೀರಿ, ಶೌಕತ್ ಅಲಿ ಆಲೂರ, ಸಿದ್ದು ಕಾಳಗಿ ಕೂಟನೂರ, ಚಂದ್ರಶೇಖರ ಹೊಸಮನಿ, ಲಕ್ಕಪ್ಪ ಕೂಟನೂರ, ನೀಲಕಂಠ ಪಾಟೀಲ ಕಟ್ಟಿಸಂಗಾವಿ, ಬಸವರಾಜ ಕಂಕಿ ನೆಲೋಗಿ, ಚಂದ್ರಶೇಖರ ಹರನಾಳ, ಕಾಶಿಂ ಪಟೇಲ ಮುದಬಾಳ, ಅಬ್ದುಲ್ ರಹೇಮಾನ ಪಟೇಲ, ಬಹಾದ್ದೂರ ರಾಠೊಡ, ಹಯ್ನಾಳಪ್ಪ ಗಂಗಾಕರ್, ಮಹೆಬೂಬ್ ಶಾನವಾಲೆ, ಮಹಿಮೂದ್ ನೂರಿ, ಮಹಿಮೂದ್ ಪಟೇಲ, ರವಿ ಕೋಳಕೂರ, ಮರೆಪ್ಪ ಸರಡಗಿ ಸೇರಿದಂತೆ ಬಿಸಿಎಂ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.