Advertisement

ಶೈಕ್ಷಣಿಕ ಅಭಿವೃದ್ದಿಗೆ ಮೊದಲ ಆದ್ಯತೆ: ವೆಂಕಟರೆಡ್ಡಿ ಗೌಡ

05:01 PM Feb 05, 2022 | Team Udayavani |

ಯಾದಗಿರಿ: ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯೊಂದಿಗೆ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕಲ್ಪಿಸಲು ಹೆಚ್ಚಿನ ಅವಕಾಶ ಒದಗಿಸಲಾಗುತ್ತಿದೆ ಎಂದು ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.

Advertisement

ನಗರದಲ್ಲಿ ನಿರ್ಮಿಸಿರುವ ಸರ್ಕಾರಿ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಿಸಲು ಸರ್ಕಾರ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡುತ್ತಿದೆ. ಅದನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ವಸತಿ ನಿಲಯಗಳೇ ಆಧಾರ. ಹೀಗಾಗಿ ವಸತಿ ನಿಲಯದಲ್ಲಿ ವಾಸಿಸುವ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹಾಗೆಯೇ ಗುಣಮಟ್ಟದ ಆಹಾರ ನೀಡಬೇಕು. ಸರ್ಕಾರದಿಂದ ಬರುವ ಸೌಲಭ್ಯ ನೇರವಾಗಿ ಮಕ್ಕಳಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಏನಾದರೂ ನಿರ್ಲಕ್ಷ್ಯ ವಹಿಸಿದರೆ ಸುಮ್ಮನಿರುವುದಿಲ್ಲ ಎಂದರು.

ಈ ವೇಳೆ ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಕಿ, ಎಇಇ ವೆಂಕಟರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸವ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next