ಮಸ್ಕಿ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿನ ರಸ್ತೆ ಸುಧಾರಣೆ ಹಾಗೂ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳ ಅನುದಾನ ತರಲಾಗುತ್ತದೆ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ತಾಲೂಕಿನ ತಲೇಖಾನ ಗ್ರಾಮದಲ್ಲಿ ಶುಕ್ರವಾರ ಸರ್ಕಾರಿ ಶಾಲೆಯ ಕಾಂಪೌಂಡ್ ಹಾಗೂ ಕ್ರೀಡಾಂಗಣ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಹಾಗೂ ಶಾಸಕರ ಅನುದಾನದಲ್ಲಿ ಹೆಚ್ಚಿನ ಹಣವನ್ನು ಶಾಲೆಗಳ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಹಂತ-ಹಂತವಾಗಿ ತಾಲೂಕಿನ ಗ್ರಾಮೀಣ ಭಾಗದ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚು ಒತ್ತು ನೀಡಲಾಗುವುದು. ಗ್ರಾಮಸ್ಥರು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದ ಅವರು ನಿಗದಿತ ಅವದಿ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹೇಳಿದರು.
ಯರದೊಡ್ಡಿ ತಾಂಡಾ, ವೇಣಪ್ಪನ ತಾಂಡಾ, ಕಸ್ತೂರಿ ತಾಂಡಾ, ಹಡಗಲಿ ತಾಂಡಾ, ತಲೇಖಾನ ಅಂತರಗಂಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರಸ್ತೆ, ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಆರ್. ಬಸನಗೌಡ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ತಲೇಖಾನದ ಬಸವ ನಿರಂಜನ ಸ್ವಾಮೀಜಿ, ಮುಖಂಡ ದೇವಪ್ಪ, ವೀರನಗೌಡಮ ಹನುಮಂತಪ್ಪ, ಕನಕಪ್ಪ ಸೇರಿದಂತೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.