Advertisement

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ

06:51 PM Nov 04, 2021 | Team Udayavani |

ಬೆಳಗಾವಿ: ಯಮಕನಮರಡಿ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಕೆಪಿಸಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಹೇಳಿದರು.

Advertisement

ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಸರ್ಕಾರಿ ಕನ್ನಡ ಹಾಗೂ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರದ ಅನುದಾನದಲ್ಲಿ ಈ ಶಾಲೆಗಳ ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದರು.

ಗ್ರಾಮದ ಸರ್ಕಾರಿ ಕನ್ನಡ ಹಾಗೂ ಮರಾಠಿ ಶಾಲೆಯಲ್ಲಿ 90 ಲಕ್ಷ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಅನುದಾನದಲ್ಲಿ ಶೌಚಾಲಯ, ಶಾಲಾ ಕೊಠಡಿ, ಆಟದ ಮೈದಾನ ನಿರ್ಮಾಣ ಸೇರಿ ವಿವಿಧ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

ಗ್ರಾಮಸ್ಥರ ಕೋರಿಕೆಯಂತೆ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಾಣ, ಬೀದಿದೀಪ ಅಳವಡಿಕೆ ಸೇರಿ ವಿವಿಧ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಅವರು, ಕಳೆದ ಮೂರು ವರ್ಷಗಳಿಂದ ಕ್ಷೇತ್ರಕ್ಕೆ ಯಾವುದೇ ಹೊಸ ಮನೆಗಳು ಮಂಜೂರಾಗಿಲ್ಲ. ಹಳೆಯ ಮನೆಗಳ ಬಾಕಿ ಬಿಲ್‌ ಕೂಡ ಸರ್ಕಾರದಿಂದ ಬಿಡುಗಡೆಯಾಗಿಲ್ಲ ಎಂಬುದು ತಮ್ಮ ಗಮನಕ್ಕೆ ಬಂದಿದ್ದು ಮನೆಗಳನ್ನು ಮಂಜೂರು ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಮನೆಗಳು ಮಂಜೂರಾದ ತಕ್ಷಣ ಅವುಗಳನ್ನು ಅರ್ಹರಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕರು ಹಾಗೂ ಗ್ರಾಮಸ್ಥರು ಹಾಜರಿದ್ದರು. ನಂತರ ಗ್ರಾಮದ ನಾಯಕ್‌ ಸ್ಟೂಡೆಂಟ್‌ ಫೆಡರೇಶನ್‌ ನ ಸಿದ್ದಾರೂಢ ಕನ್ನಡ ಪ್ರೌಢಶಾಲೆಯಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಸತೀಶ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು.

Advertisement

ಶಾಲೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಮೈದಾನದಲ್ಲಿ ಚಿಕ್ಕೋಡಿ, ಬೆಳಗಾವಿ ಶೆ„ಕ್ಷಣಿಕ ಜಿಲ್ಲಾ ದೆ„ಹಿಕ ಶಿಕ್ಷಣ ಶಿಕ್ಷಕರ ಸಮಾವೇಶ ಹಾಗೂ ಅಂತಾರಾಜ್ಯ ಕಬಡ್ಡಿ ಪಂದ್ಯಾವಳಿ ಏರ್ಪಡಿಸಬೇಕು ಎಂದು ಶಾಲೆಯ ಶಿಕ್ಷಕರು ಸತೀಶ ಜಾರಕಿಹೊಳಿ ಅವರಿಗೆ ಮನವಿ ಮಾಡಿದರು.

ಬೆಳಗಾವಿ ಕ್ಷೇತ್ರ ಶಿಕ್ಷಣಾಧಿಕಾರಿ ಜುಟ್ಟನವರ್‌, ಶಾಲೆಯ ಪ್ರಧಾನ ಶಿಕ್ಷಕರು ಉಪಸ್ಥಿತರಿದ್ದರು. ಇದಲ್ಲದೆ ಅಷ್ಟೆ ಹಾಗೂ ಚಂದಗಡ ಗ್ರಾಮಗಳಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಪರಿಮಿತಿ ಚರಂಡಿ (500 ಮೀ.) ನಿರ್ಮಾಣ, ಅಷ್ಟೆ ಗ್ರಾಮದಲ್ಲಿ 11 ಲಕ್ಷ ರೂ. ವೆಚ್ಚದಲ್ಲಿ ಕನ್ನಡ ಶಾಲೆ ಕೊಠಡಿ ನಿರ್ಮಾಣ ಹಾಗೂ 95 ಲಕ್ಷ ರೂ. ವೆಚ್ಚದಲ್ಲಿ ಹುದಲಿ ಬೆ„ ಪಾಸ್‌ 2 ಕಿ.ಮೀ. ರಸ್ತೆ ಅಗಲೀಕರಣ ಕಾಮಗಾರಿಗಳಿಗೆ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಇಂಜನಿಯರ್‌ ಸಂಜೀವಕುಮಾರ ಹುಲಕಾಯಿ, ಎಇಇ ಸುಭಾಷ ನಾಯಿಕ, ಎಇ ಮುಕುಂದ ವಾಳವೇಕರ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next