Advertisement

ಶಾಂತಿಯುತವಾಗಿ ಶಾಲೆ- ಕಾಲೇಜುಗಳನ್ನು ಆರಂಭಿಸುವುದು ಮೊದಲ ಆದ್ಯತೆ: ಸಿಎಂ ಬೊಮ್ಮಾಯಿ

10:23 AM Feb 13, 2022 | Team Udayavani |

ಹುಬ್ಬಳ್ಳಿ: ಈಗಾಗಲೇ ಹೇಳಿದಂತೆ ಶಾಲೆಗಳನ್ನು ಆರಂಭಿಸಲು ಸೂಚನೆ ನೀಡಲಾಗಿದ್ದು, ಶಾಂತಿಯುತವಾಗಿ ಶಾಲೆ- ಕಾಲೇಜುಗಳನ್ನು ಆರಂಭಿಸುವುದು ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರದಿಂದ ಶಾಲೆಗಳು ಆರಂಭವಾಗಲಿವೆ. ಜಿಲ್ಲಾಧಿಕಾರಿಗಳು, ಡಿಡಿಪಿಐ, ಶಾಲಾ ಆಡಳಿತ ಮಂಡಳಿಗಳು ಶಾಂತಿ ಸಭೆ ನಡೆಸುವಂತೆ ಈಗಾಗಲೇ ಸೂಚಿಸಿದ್ದೇನೆ. ಶಾಂತಿಯುತವಾಗಿ ಶಾಲೆಗಳು ಆರಂಭವಾಗುತ್ತವೆ. ಪರಿಸ್ಥಿತಿ ನೋಡಿಕೊಂಡು ಕಾಲೇಜಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಮೊದಲಿನ ರೀತಿಯಲ್ಲಿ ಸೌಹಾರ್ಧಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನ ಆರಂಭಿಸುವುದು ನಮ್ಮ‌ ಮೊದಲ ಆದ್ಯತೆಯಾಗಿದೆ. ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಬಗ್ಗೆ ನಿಗ ವಹಿಸಲಾಗುತ್ತಿದೆ‌. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡುವ, ಸುಳ್ಳು ಸಂದೇಶಗಳನ್ನ ಹರಿಬಿಡುವವರ ಮೇಲೆ ನಮ್ಮ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ‌. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಎರಡೂ ವರ್ಷದಲ್ಲಿ ಆರ್ಥಿಕತೆ ಬಹಳ ನಷ್ಟ ಆಗಿದೆ. ಮುಂಬರುವ ಆಯ-ವ್ಯಯದಲ್ಲಿ ಅದಕ್ಕೆ ಬೂಸ್ಟ್ ಕೊಡುವ ಪ್ರಯತ್ನ ಮಾಡುತ್ತೇವೆ. ಕಳೆದ ನಾಲ್ಕೈದು ತಿಂಗಳಲ್ಲಿ ಒಂದಿಷ್ಟು ಆರ್ಥಿಕ ಚೇತರಿಕೆ ಕಾಣುತ್ತಿದೆ. ಆರ್ಥಿಕ ಅಭಿವೃದ್ಧಿ, ಜನ ಕಲ್ಯಾಣ, ಆರ್ಥಿಕ ಶಿಸ್ತು ಇವುಗಳೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಆಯ-ವ್ಯಯ ಹೊಂದಿರುತ್ತದೆ.  ತಳಹದಿಯಲ್ಲಿ ಉಳಿದಿರುವ ದುಡಿಯುವ ಜನರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸಮಗ್ರ ಅಭಿವೃದ್ದಿ ಚಿಂತನೆ ನನ್ನ ಗಮನದಲ್ಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next