Advertisement
ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಎಂ.ಕೆ.ಸೋಮಶೇಖರ್ ಅವರು ಜಯನಗರದ ಆರೋಗ್ಯ ಕೇಂದ್ರದಲ್ಲಿ ಚಾಲನೆ ನೀಡಿದರು. ಮೂರು ದಿನಗಳ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿರುವ ಐದು ವರ್ಷದೊಳಗಿನ 2,63,480 ಮಕ್ಕಳಿಗೆ ಲಸಿಕೆ ಹಾಕಬೇಕೆಂಬ ಗುರಿ ಹೊಂದಿದೆ.
Related Articles
ಹುಣಸೂರು: ತಾಲೂಕಾದ್ಯಂತ ಭಾನುವಾರದಂದು ನಡೆದ ಮೊದಲ ಹಂತದ ಪಲ್ಸ್ ಪೊಲೀಯೋ ಕಾರ್ಯಕ್ರಮ ಯಶಸ್ವಿಯಾಗಿದ್ದು, ಶೇ 97 ರಷ್ಟು ಗುರಿ ಸಾಧಿಸಲಾಗಿದೆ. ತಾಲೂಕಿನಲ್ಲಿ ಒಟ್ಟು 5 ವರ್ಷದ 23.023 ಮಕ್ಕಳ ಪೈಕಿ 22.308 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಒಟ್ಟು 213 ಬೂತ್‌ಗಳನ್ನು ತೆರೆದಿದ್ದು, ಆರೋಗ್ಯ-ಆಶಾ,ಅಂಗನವಾಡಿ ಕಾರ್ಯಕರ್ತರು, ಸ್ವಯಂಸೇವಕರು ಸೇರಿದಂತೆ 852 ಮಂದಿ ಸಿಬ್ಬಂದಿಗಳು ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Advertisement
ಇನ್ನುಳಿದ ಮಕ್ಕಳಿಗೆ ಕಾರ್ಯಕರ್ತರು ಇನ್ನು ಎರಡು ದಿನ ಮನೆ-ಮನೆಗೆ ತೆರಳಿ ಲಸಿಕೆ ಹಾಕುವರೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೇವತಾಲಕ್ಷಿ ತಿಳಿಸಿದರು. ಭಾನುವಾರ ನಡೆದ ಬಾಚಳ್ಳಿ ಜಾತ್ರೆಯಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಹದೇವ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಯಿತು.
ತಾಪಂ ಅಧ್ಯಕ್ಷರಿಂದ ಉದ್ಘಾಟನೆ: ಹುಣಸೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ತಾಪಂ ಅಧ್ಯಕ್ಷೆ ಪದ್ಮಮ್ಮ ಬಸವರಾಜು ಉದ್ಘಾಟಿಸಿದರು.