Advertisement
ನಗರದ ಪೊಲೀಸ್ ಡಿಎಆರ್ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಧ್ವಜಾರೋಹಣ ನೆರವೇರಿಸಿದರು. ನಂತರ ಪದಾತಿ ದಳ, ಸ್ಕೌಟ್ಸ್, ಗೈಡ್ಸ್ ಮತ್ತು ವಿವಿಧ ಶಾಲಾ ಕಾಲೇಜುಗಳ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.
Related Articles
Advertisement
ಕಡ್ಡಾಯ ಶಿಕ್ಷಣದ ಜತೆಗೆ ಗುಣಮಟ್ಟದ ಶಿಕ್ಷಣಕ್ಕೂ ಆದ್ಯತೆ ನೀಡಬೇಕಿದೆ. ಮಕ್ಕಳಿಗೆ ಸಂಸ್ಕಾರದ ಜತೆಗೆ ಶಿಕ್ಷಣವನ್ನೂನೀಡಬೇಕಿದೆ. ಅದರ ಜತೆಗೆ ಪರಿಸರ ಸಂರಕ್ಷಣೆಗಾಗಿ ಸರ್ಕಾರವು ಹಸಿರು ಕರ್ನಾಟಕ ಯೋಜನೆ ಜಾರಿಗೆ ತಂದಿದ್ದು, ಇಂದಿನಿಂದಲೇ ಜಾರಿಗೊಳಿಸಲಾಗುವುದು. ರಾಜ್ಯವನ್ನು ಗುಡಿಸಲು ಮುಕ್ತ ಮಾಡಲು ವಸತಿ ರಹಿತರಿಗೆ ಮನೆ ನಿರ್ಮಿಸಲಾಗುತ್ತಿದೆ. ಪಶುಸಂಗೋಪನಾ ಇಲಾಖೆಯ ವಿಭಾಗೀಯ ಕಚೇರಿ ರಾಯಚೂರಿನಲ್ಲಿ ಶೀಘ್ರದಲ್ಲಿ ಕಾರ್ಯಾರಾಂಭಗೊಳ್ಳಲಿದೆ ಎಂದು ಹೇಳಿದರು. ನಗರ ಶಾಸಕ ಡಾ| ಶಿವರಾಜ ಪಾಟೀಲ, ಸಂಸದ ಬಿ.ವಿ. ನಾಯಕ, ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ, ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್, ಜಿಪಂ ಸಿಇಒ ನಲಿನ್ ಅತುಲ್, ಎಸ್‌ಪಿ ಡಿ.ಕಿಶೋರಬಾಬು, ಎಡಿಸಿ ಗೋವಿಂದರೆಡ್ಡಿ ಸೇರಿ ಇತರರು ಪಾಲ್ಗೊಂಡಿದ್ದರು. ಮಕ್ಕಳ ನೃತ್ಯಕ್ಕೆ ಜನ ಫಿದಾ ನಗರದ ಎಸ್‌ಪಿ ಕಚೇರಿ ಆವರಣದಲ್ಲಿ 72ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ವಿವಿಧ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶನ ಮಾಡುವ ಮೂಲಕ ನೆರೆದವರನ್ನು ರಂಜಿಸಿದರು. ಸುಮಾರು 200ಕ್ಕೂ ಅಧಿಕ ಮಕ್ಕಳು ಏಕಕಾಲಕ್ಕೆ ನೃತ್ಯ ಪ್ರದರ್ಶಿಸಿದರು. ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಕರಾಟೆ ಪ್ರದರ್ಶನದ ವಿವಿಧ ಸಾಹಸಗಳನ್ನು ಮಾಡಿ ಗಮನ ಸೆಳೆದರು. ಧ್ವಜಾರೋಹಣ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಾನಾ ಶಾಲೆಗಳ ವಿದ್ಯಾರ್ಥಿಗಳು ವಿವಿಧ ದೇಶಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿದರು. ಮಕ್ಕಳ ವಿವಿಧ ದೇಶಭಕ್ತರ ವೇಷ ಧರಿಸಿ ಗಮನ ಸೆಳೆದರು.