Advertisement

Congress: ಸೋನಿಯಾ, ರಾಹುಲ್‌ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

09:04 PM Jul 18, 2023 | Team Udayavani |

ಭೋಪಾಲ್‌: ಕಾಂಗ್ರೆಸ್‌ ನಾಯಕರಾದ  ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವು ಪ್ರತಿಕೂಲ ಹವಾಮಾನದಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ಭೋಪಾಲ್‌ ಪೊಲೀಸರು ತಿಳಿಸಿದ್ದಾರೆ.

Advertisement

ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ಸೋನಿಯಾ ಮತ್ತು ರಾಹುಲ್‌ ದೆಹಲಿಗೆ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ಭೋಪಾಲ್‌ ವಿಮಾನ ನಿಲ್ದಾಣದಿಂದ ರಾತ್ರಿ 9.30 ರ ಸುಮಾರಿಗೆ ಇಂಡಿಗೋ ವಿಮಾನದಲ್ಲಿ ಸೋನಿಯಾ ಮತ್ತು ರಾಹುಲ್‌ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಇದನ್ನೂ ಓದಿ: Goa: ವಿಧಾನಸಭೆಯ ಮುಂಗಾರು ಅಧಿವೇಶನ ಕಲಾಪದಲ್ಲೂ ಟೊಮ್ಯಾಟೋ ಚರ್ಚೆ

Advertisement
Advertisement

Udayavani is now on Telegram. Click here to join our channel and stay updated with the latest news.

Next