Advertisement

ಫ್ಲಿಪ್‌ ಕಾರ್ಟ್‌ ಕಸ್ಟಮರ್‌ ಕೇರ್‌ ಸಿಬ್ಬಂದಿ ಎಂದು ನಂಬಿಸಿ ಸಾವಿರಾರೂ ರೂ. ವಂಚನೆ

10:06 AM May 14, 2022 | Team Udayavani |

ಬೆಂಗಳೂರು: ಫ್ಲಿಪ್‌ ಕಾರ್ಟ್‌ ಕಸ್ಟಮರ್‌ ಕೇರ್‌ ಸಿಬ್ಬಂದಿ ಎಂದು ನಂಬಿಸಿ, ಮಹಿಳೆಯೊಬ್ಬರಿಗೆ ಸಾವಿರಾರು ರೂ. ವಂಚಿಸಿದ ಘಟನೆ ನಡೆದಿದೆ.

Advertisement

ಈ ಸಂಬಂಧ ಸಂಪಿಗೆಹಳ್ಳಿ ನಿವಾಸಿ ಅನುಸೂಯ ಈಶಾನ್ಯ ವಿಭಾಗದ ಸೆನ್‌ ಠಾಣೆಗೆ ದೂರು ನೀಡಿದ್ದಾರೆ. ಅನುಸೂಯ ಎಂಬಾಕೆ ಫ್ಲಿಪ್‌ ಕಾರ್ಟ್‌ನಲ್ಲಿ ಟೀಶರ್ಟ್‌ ಬುಕ್‌ ಮಾಡಿದ್ದರು. ಆದರೆ, ನಿಗದಿತ ಸಮಯಕ್ಕೆ ಬಾರದಕ್ಕೆ ಗೂಗಲ್‌ನಲ್ಲಿ ಸಿಕ್ಕ ಫ್ಲಿಪ್‌ ಕಾರ್ಟ್‌ ಕಸ್ಟಮರ್‌ ಕೇರ್‌ ನಂಬರ್‌ಗೆ ಕರೆ ಮಾಡಿದ್ದಾರೆ.

ಇದನ್ನೂ ಓದಿ:ಸಿನಿಮಾ ಶೂಟಿಂಗ್‌ಗೆ ಬಳಸುತ್ತಿದ್ದ ಹಳೇ ಅಂಬಾಸಿಡರ್‌ ಕಾರಿನಲ್ಲಿ ಮೃತ ದೇಹ ಪತ್ತೆ

ಆ ಕಡೆ ಕರೆ ಸ್ವೀಕರಿಸಿದ ವ್ಯಕ್ತಿ, ಸಮಸ್ಯೆ ಬಗೆಹರಿಸುತ್ತೇವೆ ಎಂದು ನಂಬಿಸಿದ್ದಾನೆ. ಬಳಿಕ ಏನಿಡೆಸ್ಕ್ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸೂಚಿಸಿ, ಮಹಿಳೆಯಿಂದ ಒಟಿಪಿ ಪಡೆದುಕೊಂಡಿದ್ದಾನೆ. ಬಳಿಕ ಅನುಸೂಯ ಅವರ ಖಾತೆಯಿಂದ 34,057 ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾನೆ ಎಂದು ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಸೆನ್‌ ಠಾಣೆ ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next