Advertisement

ಅರಣ್ಯ ಸಂರಕ್ಷಿಸದಿದ್ದರೆ ಅಪಾಯ

12:22 PM Jun 09, 2019 | Suhan S |

ಯಲಬುರ್ಗಾ: ಇಂದಿನ ದಿನಮಾನಗಳಲ್ಲಿ ಆರೋಗ್ಯಕರ ಬದುಕು ನಡೆಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಛ ಹಾಗೂ ಉತ್ತಮ ಪರಿಸರ ಅಗತ್ಯ.ಆದ್ದರಿಂದ ಮರಗಿಡಗಳನ್ನು ಹೆಚ್ಚು ಬೆಳೆಸುವ ಮೂಲಕ ಪ್ರಕೃತಿಗೆ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶ್ರೀ ಈಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಬಸವರಾಜ ರಾಜೂರು ಹೇಳಿದರು.

Advertisement

ತಾಲೂಕಿನ ಗುನ್ನಾಳ ಗ್ರಾಮದ ಶ್ರೀಈಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬರು ಮರಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ. ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪರಿಸರ ಪ್ರೇಮ ಮೂಡಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‌.ಎಸ್‌. ದೇಸಾಯಿ, ಶಾಲೆಗಳಲ್ಲಿ ಮರಗಿಡಗಳನ್ನು ಬೆಳೆಸುವ ಮೂಲಕ ಶಾಲೆಯ ಸೌಂದರ್ಯವನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡಲು ಸಾಧ್ಯವಿದೆ. ಶಾಲೆಯಲ್ಲಿ ನೆಟ್ಟ ಗಿಡಗಳನ್ನು ಉಳಿಸಿ ಬೆಳೆಸಬೇಕಾದ್ದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಕರಿಹನುಮಂತ ಶೆಟ್ಟರ್‌, ಅಮರೇಶ ಅಮರಾವತಿ ಹಾಗೂ ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next