Advertisement

ಬಿಜೆಪಿ ತೊರೆದು ಕೈ ಹಿಡಿದ ಮಾಜಿ ಉಪಮೇಯರ್‌

12:27 AM Apr 09, 2019 | Team Udayavani |

ಬೆಂಗಳೂರು: ಬೆಂಗಳೂರಿನ ಮೂರೂ ಲೋಕಸಭೆ ಕ್ಷೇತ್ರವನ್ನು ಗೆಲ್ಲಲು ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್‌, ಬಿಜೆಪಿ ನಾಯಕರನ್ನು ತನ್ನತ್ತ ಸೆಳೆಯುವ ಕಾರ್ಯದಲ್ಲಿ ನಿರತವಾಗಿದೆ.

Advertisement

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ಬಿಬಿಎಂಪಿ ಮಾಜಿ ಉಪಮೇಯರ್‌ ಎಂ.ಲಕ್ಷ್ಮೀನಾರಾಯಣ್‌ ಅವರು ಸೋಮವಾರ ನಗರದ ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಸೇರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌, ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಅವರನ್ನು ಸ್ವಾಗತಿಸಿದರು. ಈ ವೇಳೆ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಎಂ.ಕೃಷ್ಣಪ್ಪ, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‌ ಇದ್ದರು.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ಪ್ರಬಲ ನಾಯಕ ಎನಿಸಿಕೊಂಡಿರುವ ಎಂ.ಲಕ್ಷ್ಮೀನಾರಾಯಣ, ಪಕ್ಷದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ನಡೆದ ಏಕಪಕ್ಷೀಯ ನಿರ್ಧಾರ ಕುರಿತು ಅಸಮಾಧಾನ ಹೊರಹಾಕಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಸೇರಿದ್ದಾರೆ.

ಹಾಗೇ ಜೆಡಿಎಸ್‌ ಮಾಜಿ ಕಾರ್ಪೊರೇಟರ್‌ ಆರೀಫ್ ಪಾಷಾ ಸಹ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಹಾಗೂ ಸಚಿವ ಜಮೀರ್‌ ಅಹಮದ್‌ ಖಾನ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದರು.

ಬಿಜೆಪಿ ಸದಸ್ಯೆ ಪತಿ ಕಾಂಗ್ರೆಸ್‌ಗೆ: ರಾಜಾಜಿನಗರ ವಿಧಾನಸಭೆ ಕ್ಷೇತ್ರದ ದಯಾನಂದ ನಗರ ವಾರ್ಡ್‌ನ ಬಿಜೆಪಿ ಕಾರ್ಪೊರೇಟರ್‌ ಕುಮಾರಿ ಪಳಿನಿ ಅವರ ಪತಿ ಪಳಿನಿಕಾಂತ ಸೋಮವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next