Advertisement
ಡಿ. 10ರಂದು ಹಿರಿಯ ಸಾಹಿತಿ ಮಲಾರು ಜಯರಾಮ ರೈ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ. ಸಮ್ಮೇಳನ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್ ನೇತೃತ್ವದಲ್ಲಿ ವ್ಯವಸ್ಥೆ ಸಜ್ಜುಗೊಂಡಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಬಂಟ್ವಾಳ ತಾ| ತುಳು ಸಾಹಿತ್ಯ ಸಮ್ಮೇಳನ ಸಮಿತಿ ಆಶ್ರಯದಲ್ಲಿ ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ನಿರಂತರ ಕಾರ್ಯಕ್ರಮ ನಡೆಯಲಿದೆ.
ಬಿ.ಸಿ. ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ತುಳುನಾಡಿನ ಸಾಂಸ್ಕೃತಿಕ ಸೊಬಗನ್ನು ಪ್ರತಿಬಿಂಬಿಸುವ ಕಲಾ ಪ್ರದರ್ಶನಗಳೊಂದಿಗೆ ತುಳುವೆರೆ ದಿಬ್ಬಣ ಸ್ಪರ್ಶಾ ಕಲಾಮಂದಿರಕ್ಕೆ ಸಾಗಿಬರಲಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಮೆರವಣಿಗೆ ಉದ್ಘಾಟಿಸಲಿದ್ದಾರೆ. 9.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸಮ್ಮೇಳನದ ಉದ್ಘಾಟನೆ ನಡೆಸಲಿದ್ದಾರೆ. ವಸ್ತು ಪ್ರದರ್ಶನ
ವಸ್ತು ಪ್ರದರ್ಶನವನ್ನು ಹಿರಿಯ ಸಾಹಿತಿ ಡಾ| ಏರ್ಯ ಲಕ್ಷ್ಮೀನಾರಾಯಣ ಆಳ್ವ ಉದ್ಘಾಟಿಸಲಿದ್ದಾರೆ. ಆಹಾರ ಸಚಿವ
ಯು.ಟಿ. ಖಾದರ್, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪ್ರಮುಖರಾದ ಬಿ.ಎಚ್. ಖಾದರ್, ಚಂದ್ರಹಾಸ ಕರ್ಕೇರ, ಪಿ. ರಾಮಕೃಷ್ಣ ಆಳ್ವ, ಸದಾಶಿವ ಬಂಗೇರ ಭಾಗವಹಿಸಲಿದ್ದಾರೆ.
Related Articles
Advertisement
ತುಳು ಸಂಸ್ಕೃತಿಯ ದ್ವಾರ ನಿರ್ಮಾಣ ಬಿ.ಸಿ.ರೋಡ್‌ನಲ್ಲಿ ತುಳುವರ ಸಾಂಸ್ಕೃತಿಕ ಪರಂಪರೆ ಪ್ರತಿಬಿಂಬಿಸುವ ದ್ವಾರ ನಿರ್ಮಾಣವಾಗಿದೆ. ತುಳುನಾಡಿನ ಕಸುಬನ್ನು ಬಿಂಬಿಸುವ ಮೀನುಗಾರಿಕೆ ದೋಣಿ, ಬೀಸು ಬಲೆ, ಧ್ವಜಾರೋಹಣಕ್ಕೆ ದೇವಸ್ಥಾನದಲ್ಲಿ ಸ್ಥಾಪಿಸುವ ಕೋಡಿಮರದ ಮಾದರಿಯ ಧ್ವಜಸ್ತಂಭ ನಿರ್ಮಾಣವಾಗಿದೆ. 50ಕ್ಕೂ ಅಧಿಕ ತುಳು ಪುಸ್ತಕಗಳ ಮಾರಾಟ ಮಳಿಗೆ, ತುಳುವರ ಪಾನೀಯಗಳ ಸ್ಟಾಲ್ ನಿರ್ಮಾಣವಾಗಿದೆ. ಕ್ರೀಡೆ ಕಂಬಳದ ಸ್ತಬ್ಧ ಚಿತ್ರವು ರಚನೆಯಾಗಿದೆ.