ರಾಯಚೂರು: ದೇಶ ಭಕ್ತರಿಗೆ ಭಾರತೀಯ ಸ್ವಾತಂತ್ರ ಹೋರಾಟದಲ್ಲಿ ಹೈದ್ರಾಬಾದ್ ಕರ್ನಾಟಕ ವಿಮೋಚನಾ ಹೋರಾಟವೇ ಐತಿಹಾಸಿಕ ಹೋರಾಟವಾಗಿದೆ ಎಂದು ಸ್ವಾತಂತ್ರ ಹೋರಾಟಗಾರ ಡಿ.ಪಂಪಣ್ಣ ಅಭಿಪ್ರಾಯಪಟ್ಟರು.
ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಗುರುಪುಟ್ಟ ಕಲಾ ಬಳಗ ಅಸ್ಕಿಹಾಳ್ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡ ಸ್ವಾತಂತ್ರ ದಿನದ ಅಮೃತ ಮಹೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ ಹೋರಾಟದಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡಿದ್ದು ಪ್ರೌಢಶಾಲೆ ವಿದ್ಯಾರ್ಥಿಯಾಗಿದ್ದಾಗ. ನಮ್ಮ ಅಜ್ಜಿ ಹೇಳುವ ಮಹಾತ್ಮ ಗಾಂಧಿ ಅವರ ಹೋರಾಟದ ಸೂರ್ತಿದಾಯಕ ಮಾತುಗಳಿಂದ ನಾವು ಸ್ವಾತಂತ್ರÂ ಹೋರಾಟಕ್ಕೆ ದುಮುಖೀದೆವು ಎಂದರು. ಮಟಮಾರಿ ಪರ್ವತಯ್ಯ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ರಾಯಚೂರು ಡಿಸಿ ಕಚೇರಿ ಮೇಲೆ ತ್ರೀವರ್ಣ ಧ್ವಜಾರೋಹಣ ಮಾಡಿದ್ದು, ಗಾಂ ಧಿ ಅವರ ಮಾರ್ಗದರ್ಶನದಲ್ಲಿ ನಮ್ಮ ಹೋರಾಟ ರೂಪರೇಷೆಗಳನ್ನು ನಿರ್ಮಿಸುವುದರಲ್ಲಿ ಹೆಜ್ಜೆ ಇಟ್ಟಿದ್ದು, ಹಂತ-ಹಂತವಾಗಿ ಸ್ವಾತಂತ್ರÂ ಹೋರಾಟದಲ್ಲಿ ಪಾಲ್ಗೊಂಡು ಹಲವು ಬಾರಿ ಜೈಲು ಶಿಕ್ಷೆ ಅನುಭವಿಸಿ, ಸರ್ಕಾರ ಗಾಂಧಿ ಜಯಂತಿ ನಿಷೇ ಧಿಸಿದಾಗ ಸರ್ಕಾರದ ವಿರುದ್ಧ ಹೋರಾಟ ಮಾಡಿದ ಘಟನೆಗಳನ್ನು ವಿವರಿಸಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಶಿಕ್ಷಣ ವಿಭಾಗದ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ ಮಾತನಾಡಿದರು. ಗುರುಪುಟ್ಟ ಕಲಾ ಬಳಗದಿಂದ ಸಂಗೀತ ಕಾರ್ಯಕ್ರಮ ನಡೆಸಲಾಯಿತು. ರಾಯಚೂರು ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಹಶೀಲ್ದಾರ್ ಡಾ| ಹಂಪಣ್ಣ ಸಜ್ಜನ್, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ಎಂ.ನಾಯಕ್, ಸಾಹಿತಿಗಳಾದ ಅಯ್ಯಪ್ಪಯ್ಯ ಹುಡ, ವೀರ ಹನುಮಾನ್ ಸೇರಿ ಇತರರಿದ್ದರು.