Advertisement

ಪ್ರಜಾಪ್ರಭುತ್ವ ಸ್ವಾತಂತ್ರ್ಯದ ಫ‌ಲಶ್ರುತಿ: ನ್ಯಾ.ಬಸಾಪುರ್‌ ಅಭಿಮತ

09:03 PM Nov 26, 2019 | Lakshmi GovindaRaj |

ಹಾಸನ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನದಿಂದ ಸಿಕ್ಕ ಸ್ವಾತಂತ್ರ್ಯ ನಮ್ಮದು. ಪ್ರಜಾಪ್ರಭುತ್ವ ಇದರ ಫ‌ಲಶ್ರುತಿ. ಇದನ್ನು ಕಾಪಾಡಿಕೊಂಡು ಹೋಗುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು 2 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ವೈ. ಬಸಾಪುರ್‌ ಅವರು ಹೇಳಿದರು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕಾನೂನು ಕಾಲೇಜು ವತಿಯಿಂದ ನಗರದ ವಕೀಲರ ಸಂಘದಲ್ಲಿ ಸಂವಿಧಾನ ದಿನದ ಅಂಗವಾಗಿ ಏರ್ಪಡಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಅವರು, ಸಂವಿಧಾನದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸಮಾಜದಲ್ಲಿ ಯಾವುದೇ ಜಾತಿ, ಪಂಗಡ, ಮೇಲು-ಕೀಳು ಎಂಬ ಭಾವನೆಯನ್ನು ಬದಿಗೊತ್ತಿ ಸಮಾನತೆ ಪರಿಪಾಲಿಸುತ್ತಿದೆ ಇದನ್ನು ನಾವು ಸ್ವಾಗತಿಸೋಣ ಎಂದರು.

ಸಮಾಜದಲ್ಲಿ ನೊಂದವರ ಪಾಲಿಗೆ ಆಶಾಕಿರಣವಾಗಿ ನಿಲ್ಲುವ ನಿಲುವು ನ್ಯಾಯಾಂಗದ್ದಾಗಿದ್ದು ಎಂದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನದಿಂದ ಸಿಕ್ಕ ಸ್ವಾತಂತ್ರ್ಯ ನಮ್ಮದು. ಪ್ರಜಾಪ್ರಭುತ್ವ ಇದರ ಫ‌ಲಶ್ರುತಿ. ಇದನ್ನು ಕಾಪಾಡಿಕೊಂಡು ಹೋಗುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ನ್ಯಾಯಾಧೀಶರಾದ ಡಿ.ವೈ. ಬಸಾಪುರ್‌ ಹೇಳಿದರು.

ಸಾರ್ವಜನಿಕರ ಸೆವೆ ಉದ್ದೇಶ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರಾಮ್‌ ನಿವಾಸ್‌ ಸೆಪಟ್‌ ಮಾತನಾಡಿ, ಸತ್ಯಮೇವ ಜಯತೇ ಎಂಬ ವಾಕ್ಯದಂತೆ ಸಾರ್ವಜನಿಕರ ಸೇವೆ ನಮ್ಮೆಲ್ಲರ ಉದ್ದೇಶವಾಗಿದೆ. ಕಾರ್ಯವ್ಯಾಪ್ತಿಯನ್ನು ಅರಿತು ಜನತೆಗೆ ಸಹಾಯ ಮಾಡಲು ಎಲ್ಲಾ ಅಧಿಕಾರಿಗಳು ಪರಸ್ಪರ ಸಹಕಾರ, ಸಮನ್ವಯತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡೋಣ ಎಂದು ಆಶಿಸಿದರು. ನಗರದ ಸರ್ಕಾರಿ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ. ಮಡಿವಾಳಪ್ಪ ಮಾಟೋಳಿ ಅವರು, ಸಂವಿಧಾನ ದಿನದ ಮಹತ್ವ ಕುರಿತು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜೆ.ಪಿ. ಶೇಖರ್‌ ಅಧ್ಯಕ್ಷತೆ ವಹಿಸಿದ್ದರು. 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್‌.ಆರ್‌. ಚೆನ್ನಕೇಶವ, 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ‌ ಚಂದ್ರಶೇಖರ ಮರಗೂರ್‌, 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ‌ ರವೀಂದ್ರ ಹೆಗಡೆ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ನಾಗವೇಣಿ, ವಕೀಲರ ಸಂಘದ ಉಪಾಧ್ಯಕ್ಷ ಸುರೇಶ್‌ ಕಟ್ಟಾಯ, ಕಾರ್ಯದರ್ಶಿ ಕಾರ್ಲೆ ಮೊಗಣ್ಣಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

ಭಾರತೀಯರಿಗೆ ಸಂವಿಧಾನವೇ ಧರ್ಮಗ್ರಂಥ
ಹಾಸನ: ಸಂವಿಧಾನವು ಭಾರತೀಯರಿಗೆ ಸೇರಿದ ಏಕೈಕ ಧರ್ಮಗ್ರಂಥದ ಸ್ವರೂಪದಲ್ಲಿ ದೊರೆತಿದೆ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಅವರು, ಭಾರತದ ಸರ್ವಧರ್ಮಗಳ ಜನರ ಜೀವನಾಡಿ, ರಕ್ಷಕನಾಗಿರುವ ಸಂವಿಧಾನಕ್ಕೆ 70ರ ಸಂಭ್ರಮ.

1950 ಜನವರಿ 26 ರಂದು ಸಂವಿಧಾನವನ್ನು ಜಾರಿ ಮಾಡಿದರೂ, ಅದನ್ನು 1949 ನವೆಂಬರ್‌ 26 ರಂದು ಅಂಗೀಕರಿಸಿ, ಶಾಸನವನ್ನಾಗಿ ವಿಧಿಸಿಕೊಳ್ಳಲಾಯಿತು ಎಂದರು. ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಪ್ರತಿಜ್ಞಾ ಧಿಯನ್ನು ಸ್ವೀಕರಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ‌ ಬಿ.ಎ. ಜಗದೀಶ್‌, ಮುಜರಾಯಿ ತಹಶೀಲ್ದಾರ್‌ ಶಾರದಾಂಬ ಮತ್ತಿತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next