Advertisement

ನಿಜವಾದ “ಉದಯವಾಣಿ’ವಾರ್ಷಿಕ ದಿನಚರಿ ಭವಿಷ್ಯ

09:55 AM Aug 01, 2019 | sudhir |

ಬೆಂಗಳೂರು: ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಪತನಗೊಂಡು, ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಉದಯವಾಣಿ “ವಾರ್ಷಿಕ ದಿನಚರಿ’ಯ ಭವಿಷ್ಯ ನಿಜವಾಗಿದೆ.

Advertisement

ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ “ಉದಯ ವಾಣಿ’ ವಾರ್ಷಿಕ ದಿನಚರಿಯಲ್ಲಿ ಹಿರಿಯ ಜ್ಯೋತಿಷಿ ಮಣಿಪಾಲದ ಎನ್‌.ಎಸ್‌. ಭಟ್‌ ಅವರು, ಪ್ರಸ್ತುತ ದೇಶದಲ್ಲಿ ವಿಪಕ್ಷಗಳು ರಚಿಸಿಕೊಂಡಿರುವ ಮಹಾಘಟಬಂಧನ್‌ ಅಷ್ಟೊಂದು ಪ್ರಸ್ತುತ ಎನಿಸುವುದಿಲ್ಲ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ 235-300ರ ತನಕ ಸ್ಥಾನಗಳನ್ನು ಪಡೆಯ ಲಿದ್ದು, ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರು. ಅದರಂತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಪಡೆದಿದ್ದು, ಮೋದಿ ಮತ್ತೆ ಪ್ರಧಾನಿಯಾಗಿದ್ದಾರೆ.

ಜತೆಗೆ ಮುಂದಿನ ಲೋಕಸಭಾ ಚುನಾವಣೆ ಅನಂತರ ಕರ್ನಾಟಕದಲ್ಲಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಸರಕಾರ ಬಿದ್ದು ಹೋಗುವ ಸಾಧ್ಯತೆ ತೋರಿ ಬರುತ್ತದೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚು ಸೀಟು ಸಿಗುವ ಸಾಧ್ಯತೆ ಇದೆ. ಬಿಜೆಪಿ ನಾಯಕ ಯಡಿಯೂರಪ್ಪ ಅವರಿಗೆ ಮುಂದಿನ ದಿನಗಳು ಆತಂಕಕಾರಿಯಾಗಿ ಮುನ್ನಡೆಯಲು ಕಷ್ಟವಾದೀತು. ಆದರೂ ಅನಿರೀಕ್ಷಿತ ರೂಪದಲ್ಲಿ ಅವರು ರಾಜ್ಯದ ಮುಖ್ಯಮಂತ್ರಿಯಾಗುವ ಸಾಧ್ಯತೆಯಿರುತ್ತದೆ ಎಂದು ಭವಿಷ್ಯ ನುಡಿದಿದ್ದರು.

ಅದರಂತೆ ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಪತನಗೊಂಡಿದ್ದು, ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next