ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಮಂಗಳೂರಿನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಿ. ಎಂ. ಜೋಶಿ ಆರೋಪ ಸಾಬೀತಾಗಿದೆ ಎಂಬ ತೀರ್ಮಾನಕ್ಕೆ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ದಂಡ ಮೊತ್ತದಲ್ಲಿ 10,000 ರೂ. ಗಳನ್ನು ಗಾಯಾಳು ಸುಜಿತ್ ಅವರಿಗೆ ನೀಡುವಂತೆ ಆದೇಶಿಸಿದ್ದಾರೆ. ಅಲ್ಲದೆ ಸರಕಾರದಿಂದಲೂ ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶ ನೀಡಿದ್ದಾರೆ. ಮೋಹನ 2013 ಮೇ 3 ರಿಂದ ಜೂನ್ 6 ತನಕ (35 ದಿನ) ನ್ಯಾಯಾಂಗ ಬಂಧನದಲ್ಲಿದ್ದು, ಈ ಅವಧಿಯನ್ನು ಶಿಕ್ಷೆಯ ಪ್ರಮಾಣದಿಂದ ಕಡಿತ ಮಾಡುವಂತೆ ನ್ಯಾಯಾಲಯ ಸೂಚಿಸಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ರಾಜು ಪೂಜಾರಿ ಬನ್ನಾಡಿ ಅವರು ಸರಕಾರದ ಪÃ ವಾದ ಮಂಡಿಸಿದ್ದರು.
Advertisement