Advertisement
ಗುರುವಾರ ಕೊಲೆಯಾದ ಸ್ಥಿತಿಯಲ್ಲಿ ಬಾಲಕಿಯ ಶವವೊಂದು ದೊರೆತಿದ್ದು ಆ ಸ್ಥಳಕ್ಕೆ ಧಾವಿಸಿದ ಪೋಷಕರು ಬಾಲಕಿಯನ್ನು ಗುರುತಿಸಿದ್ದಾರೆ. ಪೊಲೀಸರು ಅವರೊಂದಿಗೆ ಮಾತಕತೆ ನಡೆಸಿ ಸಂಶಯಾಸ್ಪದದ ಹಿನ್ನೆಲೆಯಲ್ಲಿ ಗ್ರಾಮದ ಆನಂದ್ ಅನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಅಮಲಿನಲ್ಲಿ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆನಂದ್ ಬಾಲಕಿ ಪೋಷಕರ ಸಂಬಂಧಿಕನೇ ಆಗಿದ್ದು, ಈ ಕುರಿತು ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.