Advertisement

5 ವರ್ಷಗಳ ರೂಪುರೇಷೆ

12:47 AM Jun 25, 2019 | mahesh |

ಹೊಸದಿಲ್ಲಿ: ನರೇಂದ್ರ ಮೋದಿ ಸರಕಾರದ ಈ ಅವಧಿಯ ಮೊದಲ ಬಜೆಟ್‌ ಕೇವಲ ಒಂದು ವರ್ಷದ ಗುರಿಯನ್ನು ಹೊಂದಿರು ವುದಿಲ್ಲ. ಬದಲಿಗೆ ಮುಂದಿನ ಐದು ವರ್ಷಗಳಲ್ಲಿ ನರೇಂದ್ರ ಮೋದಿ ಸರಕಾರ ಹಮ್ಮಿಕೊಳ್ಳಲಿರುವ ಯೋಜನೆಗಳ ರೂಪರೇಖೆಯನ್ನೇ ಈ ಬಾರಿಯ ಬಜೆಟ್‌ನಲ್ಲಿ ಮಂಡಿಸಲಾಗುತ್ತಿದೆ. ಮೂಲಗಳ ಪ್ರಕಾರ ದೇಶದ ಆರ್ಥಿಕತೆಯನ್ನು ವೃದ್ಧಿಸು ವುದು ಮತ್ತು ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವುದೇ ಈ ಬಜೆಟ್‌ನಲ್ಲಿ ಪ್ರಮುಖ ಅಂಶವಾಗಿರಲಿದೆ. ಈ ಎರಡು ಸಮಸ್ಯೆಗಳನ್ನು ನಿವಾರಿಸುವುದಕ್ಕೆಂದೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿರುವ ಬಜೆಟ್‌ನಲ್ಲಿ ಮಹತ್ವದ ಯೋಜನೆಗಳು ಇರಲಿವೆ ಎಂದು ಹೇಳಲಾಗಿದೆ.

Advertisement

ಆರ್ಥಿಕತೆಗೆ ಉತ್ತೇಜನ ನೀಡಲು ಬೇಡಿಕೆ ಮತ್ತು ಉದ್ಯೋಗವನ್ನು ಹೆಚ್ಚಿಸಬೇಕು. ಇದಕ್ಕೆ ಗ್ರಾಮೀಣ ಪ್ರದೇಶಗಳ ಸಬಲೀಕರಣವೇ ಉತ್ತಮ ಮಾರ್ಗವಾಗಿದ್ದು, ಬಜೆಟ್‌ನಲ್ಲಿ ಗ್ರಾಮೀಣ ಆರ್ಥಿಕತೆ ಉತ್ತೇಜನಕ್ಕೆ ಹೆಚ್ಚಿನ ಮಹತ್ವ ಒದಗಿಸಲಾಗುತ್ತದೆ ಎನ್ನಲಾಗಿದೆ. ಅಲ್ಲದೆ, ಇದರೊಂದಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಹೆಚ್ಚಳಕ್ಕಾಗಿ ಹಲವು ಔದ್ಯಮಿಕ ಉತ್ತೇಜನ ಯೋಜನೆಗಳನ್ನೂ ಘೋಷಿಸಬಹುದಾಗಿದೆ. ಮಧ್ಯಮ ವರ್ಗದ ಸಮುದಾಯಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆದಾಯ ತೆರಿಗೆ ಮಿತಿಯಲ್ಲೂ ಏರಿಕೆ ಮಾಡುವ ಸಾಧ್ಯತೆಯಿದ್ದು, ಇದರಿಂದ ಜನರಲ್ಲಿ ಖರೀದಿ ಸಾಮರ್ಥ್ಯ ಹೆಚ್ಚಲಿದೆ. ಇತ್ತೀಚೆಗೆ ಘೋಷಿಸಲಾದ ಪಿಂಚಣಿ ಯೋಜನೆ ಕೂಡ ಮಹತ್ವದ್ದಾಗಿದ್ದು, ಇದು ಜನರಲ್ಲಿ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸ ಲಿದೆ. ಈ ಮೂಲಕ ದೇಶದ ಆರ್ಥಿಕತೆಯೂ ವೃದ್ಧಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next