Advertisement
ರಾಜ್ಯದ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೂ ಶುದ್ಧ ಕುಡಿಯುವ ನೀರು ಪೂರೈಸುವ ಗುರಿಯನ್ನು 2024 ರೊಳಗೆ ಪೂರೈಸುವ ನಿಟ್ಟಿನಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ.
Related Articles
Advertisement
ಇದನ್ನೂ ಓದಿ:ಜಾಬ್ರಾ ಎಲೈಟ್ 4 ಆ್ಯಕ್ಟಿವ್ ಬಿಡುಗಡೆ; 7 ಗಂಟೆ ಬ್ಯಾಟರಿ ಲೈಫ್ ಇರುವ ಇಯರ್‌ಬಡ್
ಒಟ್ಟಾರೆ ಯೋಜನೆಗೆ 8,196 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿ ಕೇಂದ್ರ ಸರಕಾರದಿಂದ ಅನುಮೋದನೆ ಯನ್ನೂ ಪಡೆಯ ಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿ ದ್ದಾರೆ.
2021 – 22ನೇ ಸಾಲಿನಲ್ಲಿ 25.17 ಲಕ್ಷ ಮನೆಗಳಿಗೆ ನೀರು ಪೂರೈಕೆ ಮಾಡಲು ರೂಪಿಸಲಾಗಿದ್ದ 120 ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಕೇಂದ್ರ ಸರಕಾರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡಿ ಯೋಜನೆ ಅನುಷ್ಠಾನಕ್ಕೆ ಮತ್ತಷ್ಟು ವೇಗ ಸಿಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ಪ್ರಗತಿ ಪರಿಶೀಲನ ಸಭೆಯಲ್ಲಿ ಅಧಿಕಾರಿಗಳಿಗೆ ಟಾರ್ಗೆಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶುದ್ಧತೆ ಪರೀಕ್ಷೆಗೆ ಪ್ರಯೋಗಾಲಯಈ ಮಧ್ಯೆ, ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಸುರಕ್ಷಿತ ನೀರು ಒದಗಿಸುವ ನಿಟ್ಟಿನಲ್ಲಿ ಹಾಗೂ ಖಾತರಿಪಡಿಸಿಕೊಳ್ಳಲು ನೀರಿನ ಗುಣಮಟ್ಟ ಪರೀಕ್ಷೆ ನಡೆಸಲು ರಾಜ್ಯದ 31 ಜಿಲ್ಲೆಗಳಲ್ಲಿ 78 ಪ್ರಯೋಗಾಲಯ ಸ್ಥಾಪಿಸಲಾಗಿದ್ದು, ಆ ಪೈಕಿ 13 ಪ್ರಯೋಗಾಲಯಗಳಿಗೆ ಎನ್‌ಎಬಿಎಲ್ ಮಾನ್ಯತೆ ಪಡೆದು ನೀರಿನ ಗುಣಮಟ್ಟ ಪರೀಕ್ಷೆ ಕಾರ್ಯ ಆರಂಭಿಸಲಾಗಿದೆ. ಸಹಾಯವಾಣಿ ಆರಂಭ
ಜತೆಗೆ, ಗ್ರಾಮೀಣ ಭಾಗದಲ್ಲಿ ನೀರು ಮತ್ತು ನೈರ್ಮಲ್ಯ ಕುರಿತ ಕುಂದುಕೊರತೆ ಪರಿಹರಿಸಲು, ಕಾಲ ಕಾಲಕ್ಕೆ ದೂರುಗಳಿಗೆ ಸ್ಪಂದಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಪರಿಹಾರ ಸಹಾಯವಾಣಿ- 9480985555 ಅನ್ನು ಸ್ಥಾಪಿಸಿದೆ. ಇದರಿಂದಾಗಿ ಯೋಜನೆ ಪರಿಣಾಮಕಾರಿ ಜಾರಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. “ಮನೆ ಮನೆಗೆ ಗಂಗೆ’ ಯೋಜನೆಯನ್ನು 2024ಕ್ಕೆ ಪೂರ್ಣಗೊಳಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ಮುಂದಿನ ಎರಡು ವರ್ಷಗಳ ಕ್ರಿಯಾ ಯೋಜನೆ ರೂಪಿಸಿ ಕೇಂದ್ರದಿಂದ ಅನುಮೋದನೆ ಪಡೆದುಕೊಳ್ಳಲಾಗಿದೆ. ರಾಜ್ಯದ ಪ್ರತಿ ಹಳ್ಳಿ ಮನೆಯಲ್ಲೂ ಶುದ್ಧ ಕುಡಿಯುವ ನೀರು ಪೂರೈಕೆಗೆ ನಮ್ಮ ಬದ್ಧತೆ.
-ಕೆ.ಎಸ್. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ