Advertisement

ತ್ರಿನೇಶ್ವರ ಸ್ವಾಮಿ ದೇವಾಲಯಕ್ಕೆ ಚಿನ್ನದ ಕೊಳಗ ಹಸ್ತಾಂತರ

12:32 PM Feb 13, 2018 | |

ಮೈಸೂರು: ಮಹಾ ಶಿವರಾತ್ರಿ ಪ್ರಯುಕ್ತ ಅರಮನೆ ಕೋಟೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಮೂಲ ದೇವರಿಗೆ ಮಂಗಳವಾರ ಚಿನ್ನದ ಕೊಳಗ (ಚಿನ್ನದ ಮುಖವಾಡ) ಧಾರಣೆ ಮಾಡಲಾಗುವುದು. ಮೈಸೂರು ಸಂಸ್ಥಾನದ ಕೊನೆಯ ಮಹಾರಾಜ ಶ್ರೀ ಜಯ ಚಾಮರಾಜೇಂದ್ರ ಒಡೆಯರ್‌ ಅವರು 1952ರಲ್ಲಿ ಅಂದಾಜು 11 ಕೆ.ಜಿ. ತೂಕದ ಈ ಚಿನ್ನದ ಕೊಳಗವನ್ನು ಮಾಡಿಸಿಕೊಟ್ಟಿದ್ದಾರೆ.

Advertisement

ಮುಜರಾಯಿ ಇಲಾಖೆ ಸುಪರ್ದಿಯಲ್ಲಿರುವ ಈ ಚಿನ್ನದ ಕೊಳಗವನ್ನು ಶಿವರಾತ್ರಿಯ ಹಿಂದಿನ ದಿನ ಜಿಲ್ಲಾ ಖಜಾನೆಯಿಂದ ಪೊಲೀಸ್‌ ಭದ್ರತೆಯಲ್ಲಿ ತಂದು ದೇವಸ್ಥಾನದ ಪ್ರಧಾನ ಅರ್ಚಕರಿಗೆ ಹಸ್ತಾಂತರಿಸಲಾಗುತ್ತದೆ. ಅದರಂತೆ ಸೋಮವಾರ ಜಿಲ್ಲಾ ಖಜಾನೆಯಿಂದ ಚಿನ್ನದ ಕೊಳಗ ತಂದು ದೇವಾಲಯದ ಪ್ರಧಾನ ಅರ್ಚಕ ಸಂತಾನಂ ಅವರಿಗೆ ಹಸ್ತಾಂತರಿಸಲಾಯಿತು.

ಮಂಗಳವಾರ ಬೆಳಗ್ಗೆ 6ಗಂಟೆಗೆ ಸ್ವಾಮಿಗೆ ಚಿನ್ನದ ಕೊಳಗ ಧಾರಣೆ ಮಾಡಿದ ನಂತರ ರಾತ್ರಿ 12ಗಂಟೆವರೆಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಫೆ.14ರಂದು ಬೆಳಗ್ಗೆ 10.30ಕ್ಕೆ ಪೊಲೀಸ್‌ ಭದ್ರತೆಯಲ್ಲಿ ತಂದು ಮತ್ತೆ ಜಿಲ್ಲಾ ಖಜಾನೆಯಲ್ಲಿರಿಸಲಾಗುವುದು ಎಂದು ಮುಜರಾಯಿ ತಹಶೀಲ್ದಾರ್‌ ಯತಿರಾಜ್‌ ಸಂಪತುRಮಾರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next