Advertisement

ತ್ಯಾಜ್ಯ ನಿರ್ವಹಣೆ, ನದಿ ಪಾತ್ರ ಮಾಲಿನ್ಯ ತಡೆಗೂ ಸರ್ಕಾರ ಒತ್ತು

10:07 PM Mar 05, 2020 | Team Udayavani |

ರಾಜ್ಯದ 17 ನದಿ ಪಾತ್ರದ ಮಲಿನತೆ ತಡೆಗಟ್ಟಲು 1690 ಕೋಟಿ ರೂ. ಮೊತ್ತದ ಯೋಜನೆ ಕೈಗೆತ್ತಿಕೊಳ್ಳುವುದಾಗಿ ಘೋಷಿಸಿರುವ ರಾಜ್ಯ ಸರ್ಕಾರ ಇದಕ್ಕಾಗಿ ಬಜೆಟ್‌ನಲ್ಲಿ 100 ಕೋಟಿ ರೂ. ಅನುದಾನ ಒದಗಿಸಿದೆ. ರಾಜ್ಯದ 17 ನದಿ ಪಾತ್ರದ ಮಾಲಿನ್ಯ ತಡೆಗಟ್ಟಲು 1,690 ಕೋಟಿ ರೂ. ಮೊತ್ತದ ಯೋಜನೆ ರೂಪಿಸಲಾಗಿದೆ. ಯೋಜನೆಯಡಿ 20 ನಗರ ಪ್ರದೇಶಗಳಲ್ಲಿ ಒಳ ಚರಂಡಿ ವ್ಯವಸ್ಥೆ ಹಾಗೂ ಒಂದು ಪಟ್ಟಣಕ್ಕೆ “ಮಲತ್ಯಾಜ್ಯ ಸಂಸ್ಕರಣಾ ಘಟಕ’ ಅಳ ವಡಿಸಲು ನಿರ್ಧ ರಿಸಿದೆ. ಯೋಜನೆಗೆ ಆಯವ್ಯಯದಲ್ಲಿ 100 ಕೋಟಿ ರೂ. ಕಾಯ್ದಿರಿಸಲಾಗಿದೆ.

Advertisement

ಶುದ್ಧೀಕರಿಸಿದ ನೀರನ್ನು ಗೃಹೇತರ ಉದ್ದೇ ಶಕ್ಕೆ ಮರು ಬಳಕೆ ಮಾಡುವ ಯೋಜನೆ ಪ್ರಕಟಿಸಲಾಗಿದೆ. ಮುಖ್ಯವಾಗಿ ಬಳ್ಳಾರಿ, ಚಿತ್ರದುರ್ಗ, ಹುಬ್ಬಳ್ಳಿ- ಧಾರವಾಡ ನಗರಗಳಲ್ಲಿ ಶುದ್ಧೀಕರಿಸಿದ ನೀರನ್ನು ಗೃಹೇತರ ಉದ್ದೇಶಕ್ಕೆ ಮರು ಬಳಕೆ ಮಾಡುವ ಯೋಜನೆಗೆ 20 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಕಾರ್ಯಕ್ರಮವನ್ನು ಬಾಹ್ಯ ನೆರವಿನೊದಿಗೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಅದರಂತೆ ಈ ಯೋಜನೆ ಪೂರ್ವ ಕಾರ್ಯಸಾಧ್ಯತಾ ವರದಿ ಮತ್ತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವ ಭರವಸೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next