Advertisement
ನಿಗದಿತ ಅವಧಿಯಲ್ಲಿ ತಾ.ಪಂ. ಮತ್ತು ಜಿ.ಪಂ.ಗಳಿಗೆ ಚುನಾವಣೆ ನಡೆಸುವ ಬಗ್ಗೆ ಹಾಗೂ ಸೀಮಾ ನಿರ್ಣಯ ಆಯೋಗವನ್ನು ರಚಿಸಿರುವುದನ್ನು ಆಕ್ಷೇಪಿಸಿ ರಾಜ್ಯ ಚುನಾವಣ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮು| ನ್ಯಾ| ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
Related Articles
Advertisement
ಅವಧಿ ವಿಸ್ತರಣೆಗೆ ಮಧ್ಯಾಂತರ ಅರ್ಜಿಸರಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳ ಮರುವಿಗಂಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆಯನ್ನು 12 ವಾರಗಳ ಒಳಗೆ ಪೂರ್ಣಗೊಳಿಸುವಂತೆ ಮೇ 24ರಂದು ನ್ಯಾಯಾಲಯ ಸರಕಾರಕ್ಕೆ ನಿರ್ದೇಶಿಸಿತ್ತು. ಈಗ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಲು ಮತ್ತೆ 3 ತಿಂಗಳು ಕಾಲಾವಕಾಶ ಕೋರಿ ಸೀಮಾ ನಿರ್ಣಯ ಆಯೋಗ ಸರಕಾರಕ್ಕೆ ಸೆ.19ರಂದು ಪತ್ರ ಬರೆದಿದೆ. ಎಲ್ಲ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಲು ಸರಕಾರ ಪ್ರಯತ್ನಿಸುತ್ತಿದ್ದು, 12 ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿ ಮಧ್ಯಾಂತರ ಅರ್ಜಿ ಸಲ್ಲಿಸಿದರು. ಅದನ್ನು ಪರಿಗಣಿಸಿದ ಪೀಠ, 12 ವಾರಗಳಲ್ಲಿ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿ ಮೇ 24ರಂದು ಹೊರಡಿಸಿದ್ದ ಆದೇಶ ಮಾರ್ಪಡಿಸಿ ಕ್ಷೇತ್ರಗಳ ನಿಗದಿ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು 12 ವಾರ ಕಾಲಾವಕಾಶ ನೀಡಿದ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿತು.