ಬೆಂಗಳೂರು: ಮೈತ್ರಿ ಸರ್ಕಾರವನ್ನು ಟೇಕ್ ಆಫ್ ಆಗಿಲ್ಲ ಎಂದು ಆರೋಪಿಸುತ್ತಿದ್ದ ಬಿಜೆಪಿ ಸರ್ಕಾರದ ಎಂಜಿನ್ ಇನ್ನೂ ಶುರು ಆಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳೊಂ ದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಸರ್ಕಾರ ರಚಿಸಲು ಶಾಸಕರ ಖರೀದಿಗೆ ನೂರಾರು ಕೋಟಿ ರೂ. ಖರ್ಚು ಮಾಡಿದ್ದಾರೆ. ಹೀಗಾಗಿ ಖರ್ಚು ಮಾಡಿರುವ ಹಣವನ್ನು ಸಂಗ್ರಹಿ ಸಲು ಸರ್ಕಾರ ವರ್ಗಾವಣೆ ದಂಧೆಗೆ ಇಳಿದಿದೆ ಎಂದು ಆರೋಪಿಸಿದರು.
ಬಿಜೆಪಿಯವರು ನೆರೆ ಪರಿಹಾರ ನೀಡುವ ವಿಚಾರ ಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಒಂದು ದೇಶ ಒಂದು ಭಾಷೆ ಎಂದು ಹಿಂದಿ ಭಾಷೆ ಹೇರುವ ಪ್ರಸ್ತಾಪ ಮಾಡುತ್ತಿದ್ದಾರೆ. ಹಿಂದಿ ಭಾಷೆಯ ಬಗ್ಗೆ ಗೌರವವಿದೆ. ಆದರೆ, ಕನ್ನಡ ಭಾಷೆ ಮೊದಲ ಆದ್ಯತೆ. ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಾಷೆ ಭಾಷೆಗಳ ನಡುವೆ ಘರ್ಷಣೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಸಂಸದರು ಯಾರೂ ಮಾತನಾಡುತ್ತಿಲ್ಲ ಎಂದು ಆರೋಪಿಸಿದರು.
ಸಚಿವ ಕೆ.ಎಸ್. ಈಶ್ವರಪ್ಪ ಕಾಂಗ್ರೆಸ್ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಮಂತ್ರಿಯಾಗುವ ಯೋಗ್ಯತೆಯೇ ಇಲ್ಲ. ಕೇಂದ್ರ ಸಚಿವ ಸದಾನಂದಗೌಡ ಅವರೂ ಸಿದ್ದರಾಮಯ್ಯ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಸದಾನಂದಗೌಡರು ತಮ್ಮನ್ನು ಮುಖ್ಯ ಮಂತ್ರಿ ಮಾಡಿದವರಿಗೆ ಮೋಸ ಮಾಡಿ ದ್ದರು ಎಂದು ತಿರುಗೇಟು ನೀಡಿದ್ದಾರೆ.
ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉಪ ಚುನಾವಣೆ ಸಿದ್ಧತೆ ಕುರಿತು ನಡೆಸಿದ ಸಭೆಗೆ ಪರಮೇಶ್ವರ್ ಅವರಿಗೂ ಆಹ್ವಾನ ನೀಡಲಾಗಿತ್ತು ಎಂದರು.