Advertisement
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷದಿಂದಾಗಿ ರಾಜ್ಯದಲ್ಲಿ ರೈತರು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಕಬಿನಿ ಹಾಗೂ ಕಾವೇರಿ ಜಲಾಶಯದ ನೀರನ್ನು ತಮಿಳುನಾಡಿಗೆ ಹರಿಸಿದ ಪರಿಣಾಮ ಈ ಭಾಗದ ರೈತರು ಇದೀಗ ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಇದಲ್ಲದೆ ಜನಸಾಮಾನ್ಯರು, ಜಾನುವಾರುಗಳು ಸಹ ಕುಡಿಯುವ ನೀರಿಗಾಗಿ ತೊಂದರೆ ಅನುಭವಿಸುವಂತಾಗಿದೆ.
Related Articles
Advertisement
ಬೃಹತ್ ಮೆರವಣಿಗೆ: ಇದಕ್ಕೂ ಮುನ್ನ ನಗರದ ಕಾಡಾ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿದರು. ಒಕ್ಕೂಟದ ರಾಜಾÂಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು ನಗರ ಪಾಲಿಕೆ ಸಮೀಪ ರಸ್ತೆತಡೆ ನಡೆಸಿ ಭಾರೀ ಪ್ರತಿಭಟನೆ ನಡೆಸಿದರು.
ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಿದ ಪ್ರತಿ¸ಟನಾಕಾರರು ರಸ್ತೆಯಲ್ಲೇ ಮಲಗಿ ಪೋಲೀಸರ ದೌರ್ಜನ್ಯ ಖಂಡಿಸಿದರಲ್ಲದೆ, ಹಗ್ಗದಲ್ಲಿ ಕೈಬಿಗಿದುಕೊಂಡು ಪ್ರತಿಭಟಿಸಿದರು. ಆದರೆ ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಇದಕ್ಕೆ ಅವಕಾಶ ನೀಡಲು ಒಪ್ಪದ ಪರಿಣಾಮ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಭಾಗ್ಯರಾಜ್ ಇನ್ನಿತರರರು ಭಾಗವಹಿಸಿದ್ದರು.
ರೈತರ ಮನವಿ ಆಲಿಸಿದ ಜಿಲ್ಲಾಧಿಕಾರಿಮೈಸೂರು: ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ತಿಂಗಳಾಂತ್ಯದಿಂದ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ರೈತರು ಹಾಗೂ ಅಧಿಕಾರಗಳ ಸಭೆ ನಡೆಸುವು ದಾಗಿ ಜಿಲ್ಲಾಧಿಕಾರಿ ಡಿ. ರಂದೀಪ್ ಭರವಸೆ ನೀಡಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂದರ್ಭ ಪ್ರತಿಭಟನಾ ಕಾರರ ಮನವಿ ಸ್ವೀಕರಿಸಿ ಮಾತನಾಡಿದರು. ಕಬಿನಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ವಿಶೇಷ ವರದಿ ನೀಡಲು ಸರ್ಕಾರ ಸೂಚಿಸಿದೆ. ಅದರಂತೆ ವರದಿ ತಯಾರಿಸು ವಲ್ಲಿ ಅಧಿಕಾರಿಗಳು ನಿರತ ವಾಗಿದ್ದಾರೆ. ಬರಗಾಲದ ಹಿನ್ನೆಲೆಯಲ್ಲಿ ಕೇಂದ್ರದ ಎರಡು ತಂಡಗಳು ಹಾಗೂ ಸಚಿವ ಸಂಪುಟ ಉಪ ಸಮಿತಿ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಪರಿಸ್ಥಿತಿ ಅವಲೋಕಿಸಿದೆ. ಈ ಸಂದರ್ಭದಲ್ಲಿ 91 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ ಹಣ ಬಂದೊಡನೆ ನೇರವಾಗಿ ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ಉಳಿದಂತೆ ಪಡಿತರ ವಿತರಣೆ, ವಿದ್ಯುತ್, ಗೋಶಾಲೆ ತೆರೆಯುವುದು ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ನಿಗಾವಹಿಸುವುದಾಗಿ ತಿಳಿಸಿದರು.