Advertisement

ಸಂಪುಟ ವಿಸ್ತರಣೆಯಾದ ದಿನವೇ ಸರ್ಕಾರ ಪತನ: ಕೆಎಸ್ ಈಶ್ವರಪ್ಪ

10:38 AM Nov 30, 2018 | Sharanya Alva |

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ಅಧಿಕಾರಕ್ಕಾಗಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ. ಸಂಪುಟ ವಿಸ್ತರಣೆಯಾದ ದಿನವೇ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ತಿಳಿಸಿದ್ದಾರೆ.

Advertisement

ಶುಕ್ರವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಇದೆಯಾ? ಸರ್ಕಾರವೇ ಇಲ್ಲ. ಇದು ಎಚ್.ಡಿ.ದೇವೇಗೌಡ ರೇವಣ್ಣ ಸರ್ಕಾರ ಎಂದು ವ್ಯಂಗ್ಯವಾಡಿದರು.

ಅಧಿಕಾರಕ್ಕಾಗಿ ಆಸೆ ಪಟ್ಟು ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಜತೆ ಸಿದ್ದರಾಮಯ್ಯ ಮೈತ್ರಿಮಾಡಿಕೊಂಡಿರಲಿಲ್ಲ. ಯಾಕೆಂದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದುವನ್ನು ಸೋಲಿಸಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಗೆ ಅಧಿಕಾರ ಬೇಕಾಗಿತ್ತು ಅದಕ್ಕಾಗಿ ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.

ಜಾರಕಿಹೊಳಿ ನಿವಾಸಕ್ಕೆ ಬಿಜೆಪಿ ಶಾಸಕ ಭೇಟಿ:

ಬಿಎಸ್ ಯಡಿಯೂರಪ್ಪ ಅವರ ಆಪ್ತ ಶಾಸಕ ಮಹದೇವಪ್ಪ ಅವರು ಇಂದು ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next