Advertisement

ಇತಿಹಾಸ ಸೃಷ್ಟಿಸಿದ್ದೆ ಸಿದ್ದು ಸರ್ಕಾರ

07:15 PM Mar 17, 2021 | Girisha |

ಸಿಂದಗಿ : ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿನ ಸರಕಾರ ಚುನಾವಣೆಯಲ್ಲಿ ನೀಡಿದ 168 ಭರವಸೆಗಳನ್ನು ಅಧಿಕಾರ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಡಾ| ಎಂ.ಬಿ. ಪಾಟೀಲ ಹೇಳಿದರು.

Advertisement

ಮಂಗಳವಾರ ಪಟ್ಟಣದ ಸಿಂದಗಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಕಾರ್ಯಾಲಯದಲ್ಲಿ ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಿಂದ 2108ರವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನಪರ, ರೈತಪರ, ಹಿಂದುಳಿದವರ, ದೀನ-ದಲಿತ ಪರ ಸರಕಾರವಾಗಿತ್ತು ಎಂದು ಹೇಳಿದರು. ದಿ| ಶಾಸಕ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಅವರು ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲ ಹೆಚ್ಚಿಸಿದೆ.

ಮಾ.19ರಂದು ಸಂಜೆ 4ಕ್ಕೆ ಸ್ಥಳೀಯ ಬಸ್‌ ನಿಲ್ದಾಣದ ಹತ್ತಿರದಲ್ಲಿನ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕಾಂಗ್ರೆಸ್‌ ಪಕ್ಷದ ಬೃಹತ್‌ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಸೇರುತ್ತಾರೆ. ಇಂದೇ ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷ 130-140 ಸ್ಥಾನಗಳ ಗೆಲುವು ಸಾಧಿಸುತ್ತದೆ ಎಂದರು. ಉಪ ಚುನಾವಣೆಯಲ್ಲಿ ವಿಠuಲ ಕೋಳ್ಳೂರ, ಅಶೋಕ ಮನಗೂಳಿ, ಶರಣಪ್ಪ ಸುಣಗಾರ, ಮಲ್ಲಣ್ಣ ಸಾಲಿ, ಎಂ.ಆರ್‌. ತಾಂಬೋಳಿ ಸೇರಿದಂತೆ 7 ಜನರು ಆಕಾಂಕ್ಷಿ ಪಟ್ಟಿಯಲ್ಲಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷದ ವರಿಷ್ಠರು ಸಭೆ ಸೇರಿ ಯಾರಿಗೆ ಟಿಕೆಟ್‌ ನೀಡಬೇಕು ಎಂದು ನಿರ್ಣಯ ಮಾಡಲಿದ್ದಾರೆ ಎಂದು ಹೇಳಿದರು.

ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ರೈತ ವಿರೋಧಿ  ಸರಕಾರಗಳಾಗಿವೆ. ದಿ| ಶಾಸಕ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದರು.

ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ರಾಜು ಆಲಗೂರ, ಶಾಸಕ ಯಶವಂತರಾಯಗೌಡ ಪಾಟೀಲ, ಮಾಜಿ ಶಾಸಕ ಅಪ್ಪಾಸಾಬ ನಾಡಗೌಡ, ಸುಭಾಷ್‌ ಛಾಯಾಗೋಳ, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೊಳ್ಳೂರ, ಶರಣಪ್ಪ ಸುಣಗಾರ, ಅಶೋಕ ಮನಗೂಳಿ, ಮೈಬೂಬ ತಾಂಬೋಳಿ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಬೆಟಗೇರಿ, ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿ ಸಂಜನಾ ಭಜಂತ್ರಿ, ಮುಖಂಡರಾದ ಅಶೋಕ ವಾರದ, ಶರಣಪ್ಪ ವಾರದ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎ. ಖತೀಬ, ಮಲ್ಲು ಗತ್ತರಗಿ, ಯುವ ಧುರೀಣರಾದ ಅಬು ಖತೀಬ, ಚನ್ನು ವಾರದ, ಯೋಗಪ್ಪಗೌಡ ಪಾಟಿಲ. ಸದಸ್ಯ ಶಾಂತವೀರ ಬಿರಾದಾರ, ಮುನ್ನಾ ಬೈರಾಮುಡಗಿ, ಭೀಮು ಬಿರಾದಾರ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next