Advertisement

ಕೋವಿಡ್‌ ನಿರ್ವಹಣೆಯಲ್ಲಿ ಸರ್ಕಾರ ಪೂರ್ಣ ವಿಫಲ

09:37 PM Jul 18, 2021 | Team Udayavani |

ಹುಬ್ಬಳ್ಳಿ: ರಾಜ್ಯ ಹಾಗೂ ಕೇಂದ್ರ ಸರಕಾರ ಕೊರೊನಾ ಪರಿಹಾರ ಹಾಗೂ ನಿರ್ವಹಣೆಯಲ್ಲಿ ವಿಫಲವಾಗಿವೆ. ಅದೆಲ್ಲದಕ್ಕೆ ಪಕ್ಷದಿಂದ ತಕ್ಕ ಉತ್ತರ ನೀಡುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು.

Advertisement

ಕಾಂಗ್ರೆಸ್‌ನಿಂದ ಹಮ್ಮಿಕೊಂಡಿರುವ ಕೋವಿಡ್‌ ಸಹಾಯ ಹಸ್ತ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ನಿಖರವಾಗಿ ಹೇಳಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಮರೆಮಾಚಿಸಲಾಗುತ್ತಿದೆ. ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಲಾಗುತ್ತಿದ್ದು, ಅವರೆಲ್ಲರಿಗೂ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದರು.

ಛಬ್ಬಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಿಗೆ ಶೋಕಾಸ್‌ ನೋಟಿಸ್‌ ನೀಡಬೇಕು. ಸಭೆಗೆ ಯಾಕೆ ಬಂದಿಲ್ಲ. ಹೈಕಮಾಂಡ್‌ ಮಾರ್ಗದರ್ಶನದ ಮೇರೆಗೆ ಅಭಿಯಾನ ಯಶಸ್ವಿಯಾಗಿಸಬೇಕು. ಇದರಲ್ಲಿ ಎಲ್ಲ ಕಾರ್ಯಕರ್ತರು ಪಾಲ್ಗೊಳ್ಳಬೇಕು. ಸರಕಾರ ಬಿಪಿಎಲ್‌ ಕಾರ್ಡ್‌ ಇದ್ದವರಿಗೆ ಮಾತ್ರ ಕೋವಿಡ್‌ ಪರಿಹಾರ ಎಂದು ಉಳಿದವರಿಗೆ ಅನ್ಯಾಯ ಮಾಡುತ್ತಿದೆ. ಕೋವಿಡ್‌ ಹೆಸರಲ್ಲಿ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಪಾಲಿಕೆ ಚುನಾವಣೆಗೆ ಸ್ಪರ್ಧೆ ಆಕಾಂಕ್ಷಿಗಳ ವ್ಯಕ್ತಿತ್ವ ಹಾಗೂ ವಾರ್ಡ್‌ನಲ್ಲಿನ ಕಾರ್ಯಸಾಧನೆ ಮಾತನಾಡುವಂತಾಗಬೇಕು ಎಂದರಲ್ಲದೆ, ಜು.30ಕ್ಕೆ ಕೋವಿಡ್‌ ಸಹಾಯ ಹಸ್ತ ಕಾರ್ಯಕ್ರಮ ಮುಗಿಯಲಿದೆ ಎಂದರು.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಇನ್ನೊಂದು ವಾರದಲ್ಲಿ ಎಲ್ಲ ಪ್ರದೇಶಗಳ ಸಮೀಕ್ಷೆ ಪೂರ್ಣವಾಗಲಿದೆ. ಸೂಕ್ತ ಸಂದರ್ಭದಲ್ಲಿ ಸರ್ಕಾರ ಕ್ರಮ ಕೈಗೊಳ್ಳದ ಕಾರಣ ಕೋವಿಡ್‌ನಿಂದ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌ ವಿಶೇಷ ಪ್ಯಾಕೇಜ್‌ಗಳು ಘೋಷಣೆಗೆ ಮಾತ್ರ ಸೀಮಿತವಾಗಿವೆ ಎಂದು ದೂರಿದರು.

ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿದರು. ಮಾಜಿ ಸಂಸದ ಪ್ರೊ| ಐ.ಜಿ. ಸನದಿ, ಮಾಜಿ ಸಚಿವ ಸಂತೋಷ ಲಾಡ್‌, ಜಿಲ್ಲಾಧ್ಯಕ್ಷರಾದ ಅನಿಲಕುಮಾರ ಪಾಟೀಲ್‌, ಅಲ್ತಾಫ್‌ ಹಳ್ಳೂರು, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ದೀಪಕ ಚಿಂಚೋರೆ, ಸದಾನಂದ ಡಂಗನವರ, ಮೋಹನ ಅಸುಂಡಿ, ನಾಗರಾಜ ಗೌರಿ, ರಜತ ಉಳ್ಳಾಗಡ್ಡಿಮಠ, ಇಸ್ಮಾಯಿಲ್‌ ತಮಟಗಾರ ಇನ್ನಿತರರು ಇದ್ದರು. ವಿದ್ಯಾನಗರ ಬ್ಲಾಕ್‌ನ 13 ವಾರ್ಡ್‌ಗಳಲ್ಲಿ ಸುಮಾರು 8600 ಮನೆಗಳನ್ನು ಈಗಾಗಲೇ ಕಾರ್ಯಕರ್ತರು ತಲುಪಿದ್ದು, ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next