Advertisement
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ವತಿಯಿಂದ ರೈತ ಹುತಾತ್ಮರ ದಿನಾಚರಣೆ ಅಂಗವಾಗಿ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡಿ, 43 ವರ್ಷದ ಹಿಂದೆ ನಡೆದ ನರಗುಂದ-ನವಿಲುಗುಂದ ಹಾವೇರಿ ಹಾಗೂ ಹಾಸನ ಜಿಲ್ಲೆ ದುದ್ದದಲ್ಲಿ ರೈತರ ಮೇಲೆ ನಡೆಸಿದ ಆಗಿನ ಸರ್ಕಾರದ ಅಮಾನುಷ ದೌರ್ಜನ್ಯದ ವಿರುದ್ಧ ಸಿಡಿದೆದ್ದ ರೈತ ಸಮುದಾಯ ಸಂಘಟಿಗರಾಗಿ ನಿರಂತರ ಹೋರಾಟ ಮಾಡುತ್ತಲೇ ಬಂದಿದೆ.
Related Articles
Advertisement
ಹುತಾತ್ಮ ರೈತರನ್ನು ಸ್ಮರಿಸುವ ಕಾರ್ಯ: ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಬಾಲಕೃಷ್ಣ ಮಾತನಾಡಿ, ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆಗಳನ್ನು ಸರ್ಕಾರ ಘೋಷಣೆ ಮಾಡಬೇಕು. ರೈತ ಈ ದೇಶದ ಬೆನ್ನೆಲುಬು ಆಗಿದ್ದಾನೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ರೈತವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಹುತಾತ್ಮರಾದ ರೈತರನ್ನು ಸ್ಮರಿಸುವ ಕಾರ್ಯ ರೈತ ಸಂಘ ಮಾಡುತ್ತಿದೆ ಎಂದು ಹೇಳಿದರು.
ಭೂಸ್ವಾಧೀನ ಪ್ರಕ್ರಿಯೆ ಕೈಬಿಡಿ: ರೈತ ಸಂಘದ ಜಿಲ್ಲಾಧ್ಯಕ್ಷ ಭುವನಹಳ್ಳಿ ವೆಂಕಟೇಶ್ ಮಾತನಾಡಿ, ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿ ಕೊಳ್ಳಲು ಮುಂದಾಗಿದೆ. ಹರಳೂರು, ಕೈಗಾರಿಕಾ ಪ್ರದೇಶ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇದೇ ಹೋಬಳಿಯಲ್ಲಿ 7 ಸಾವಿರ ಎಕರೆಗೂ ಹೆಚ್ಚು ಕೃಷಿ ಭೂಮಿಯನ್ನು ಕಸಿದುಕೊಂಡಿದೆ. ಕೃಷಿಯನ್ನೇ ನಂಬಿ ಬದುಕುತ್ತಿರುವ 13ಹಳ್ಳಿಗಳ ರೈತರ ಜೀವನಾಧಾರ ವಾಗಿರುವ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದು, ಕೂಡಲೇ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಉಪಾಧ್ಯಕ್ಷ ಡಾ.ಮಲ್ಲೇಶ್, ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ(ನಾಣಿ), ಗೌರವಾಧ್ಯಕ್ಷ ವಿನೋದ್ ಗೌಡ, ತಾಲೂಕು ಅಧ್ಯಕ್ಷ ಜಯಶಂಕರ್, ಉಪಾಧ್ಯಕ್ಷ ಗಯಾಜ್ ಭಾಷ, ಮಹಿಳಾ ಘಟಕದ ಆಧ್ಯಕ್ಷೆ ಚೈತ್ರಾ ಹಾಗೂ ಮತ್ತಿತರರು ಇದ್ದರು.