ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯಾದ್ಯಂತ ಕೊಲೆಗಳು ಆಗುತ್ತಿದೆ. ಕಾಂಗ್ರೆಸ್ ನೇತೃತ್ವ, ಕೃಪಾಕಟಾಕ್ಷದಲ್ಲಿ ರಾಜ್ಯದಲ್ಲಿ ಕೊಲೆಯಾಗುತ್ತಿದೆ. ದಿಗಂಬರ ಸ್ವಾಮಿ ಕೊಲೆ, ಬೆಂಗಳೂರಿನಲ್ಲಿ ಹಾಡಹಗಲೇ ಟೆಕ್ಕಿ ಸಾಯುತ್ತಾರೆ. ಉಳ್ಳಾಲದಲ್ಲಿ ನಮ್ಮ ಕಾರ್ಯಕರ್ತನ ಶವ ನೀರಲ್ಲಿ ಸಿಗುತ್ತದೆ. ಹನುಮಜಯಂತಿ ಯಶಸ್ವಿಯಾಗಿದ್ದಕ್ಕೆ ವೇಣುಗೋಪಾಲ್ ಕೊಲೆಯಾಗಿದೆ. ಎರಡೇ ತಿಂಗಳಿಗೆ ಸರ್ಕಾರ ನೈತಿಕತೆ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, A4 ಅಪರಾಧಿಯನ್ನು A1 ಮಾಡುತ್ತಾರೆ, A1 ಅಪರಾಧಿಯನ್ನು ರಕ್ಷಣೆ ಮಾಡುತ್ತಾರೆ. ಇಂದು ಇಂದಿನ ಕಾಂಗ್ರೆಸ್ ಸರ್ಕಾರದ ನೀತಿ ರಾಜಕೀಯ. 136 ಸೀಟ್ ಗೆದ್ದಿದ್ದೇವೆಂದು ದರ್ಪದಿಂದಿದ್ದಾರೆ, ಮುಂದೆ ಜನ ಪಾಠ ಕಲಿಸುತ್ತಾರೆ ಎಂದರು.
ಗ್ಯಾರಂಟಿಗಳು ಎಲ್ಲಿ ಹೋದವು, ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿ ಎಂದಿದ್ದರು.ನಿಮ್ಮ ಮೊದಲ ಕ್ಯಾಬಿನೇಟ್ ಯಾವಾಗ, ಮೊದಲು ಅದನ್ನು ಹೇಳಿ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.
ಇದನ್ನೂ ಓದಿ:INDvsWI: ಹೊಸ ಮೆಟ್ಟಿಲು ಏರಿದ ವಿರಾಟ್: ಸೆಹವಾಗ್ ದಾಖಲೆ ಮುರಿದ ಕೊಹ್ಲಿ
ಇದೇ ವೇಳೆ ಪಕ್ಷದ ಬಗ್ಗೆ ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವೆ ಉತ್ತರ ಕೊಡಲಿಲ್ಲ. ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರ ಪ್ರಶ್ನೆಗೆ ಉತ್ತರಿಸಲು ಶೋಭಾ ನಿರಾಕರಿಸಿದರು.