Advertisement

ಸರ್ಕಾರ ತಲೆತಗ್ಗಿಸುವಂತೆ ಮಾಡಲ್ಲ

07:45 AM Oct 11, 2017 | Team Udayavani |

ನವದೆಹಲಿ:“ಸರ್ಕಾರ ನನ್ನ ಮೇಲಿಟ್ಟಿರುವ ನಿರೀಕ್ಷೆಗಳಂತೆಯೇ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸರ್ಕಾರ ತಲೆತಗ್ಗಿಸುವಂತೆ ಮಾಡಲ್ಲ’ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ನಿಯೋಜಿತ ಮುಖ್ಯಸ್ಥ ವೈ.ಸಿ.ಮೋದಿ ಹೇಳಿದ್ದಾರೆ.

Advertisement

ದೆಹಲಿಯಲ್ಲಿ ಮಂಗಳವಾರ ಎನ್‌ಐಎ ಪ್ರಧಾನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಇದೇ ವೇಳೆ, ಕಚೇರಿ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌, “ಉತ್ತಮ ಗುಣಮಟ್ಟದ ನಕಲಿ ನೋಟುಗಳು ಭಯೋತ್ಪಾದನೆಗೆ ಆಮ್ಲಜನಕ ಇದ್ದಂತೆ. ನಮ್ಮ ಸರ್ಕಾರ ಉಗ್ರವಾದದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ,’ ಎಂದಿದ್ದಾರೆ. ಇದೇ ವೇಳೆ, ಅಮಿತ್‌ ಶಾ ಪುತ್ರನ ವಿರುದ್ಧದ ಆರೋಪ ಆಧಾರರಹಿತ. ಆ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದೂ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next