Advertisement

ಕೆಎಂಸಿ ಕಾಯ್ದೆ ತಿದ್ದುಪಡಿಗೆ ಸರ್ಕಾರಕ್ಕೆ ಮನವಿ

12:43 PM Nov 17, 2018 | Team Udayavani |

ಬೆಂಗಳೂರು: ನಗರದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟಡ ಅನುಮೋದನೆ ನಕ್ಷೆ ಉಲ್ಲಂ ಸುವವರ ಆಸ್ತಿ ತೆರಿಗೆ ಹೆಚ್ಚಳ ಮಾಡುವ ಕುರಿತು ಕೆಎಂಸಿ ಕಾಯ್ದೆಗೆ ತಿದ್ದುಪಡಿ ತರುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಹೇಳಿದ್ದಾರೆ.

Advertisement

ಶುಕ್ರವಾರ ನಗರದ ಬಿಎಂಆರ್‌ಡಿಎ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಅನುಮೋದನೆ ನಕ್ಷೆ ಉಲ್ಲಂ ಸಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ದಂಡ ವಿಧಿಸುವುದು ಅನಿವಾರ್ಯ. ಹೀಗಾಗಿ, ಕಾಯ್ದೆಗೆ ತಿದ್ದುಪಡಿ ತರುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಿಬಿಎಂಪಿಯಿಂದ ನೋಟಿಸ್‌ ಜಾರಿಯಾದರೆ ಕೆಲ ಮಾಲೀಕರು ಕೋರ್ಟ್‌ನಿಂದ ತಡೆಯಾಜ್ಞೆ ತರುತ್ತಿದ್ದಾರೆ. ನ್ಯಾಯಾಲಯ್ಕ ಮೊರೆ ಹೋಗಬೇಕಾದರೆ ಶೇ.50ರಷ್ಟು ಹಣವನ್ನು ಠೇವಣಿ ಇಡಬೇಕು. ತಪ್ಪಿತಸ್ಥ ಕಟ್ಟಡ ಮಾಲೀಕರ ವಿರುದ್ಧ ಕ್ರಮಕೈಗೊಳ್ಳದ ಅಧಿಕಾರಿಗಳಿಗೆ ಕನಿಷ್ಠ 3 ತಿಂಗಳ ಜೈಲು ಶಿಕ್ಷೆ ವಿಧಿಸಲು ನೆರವಾಗುವಂತೆ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.

ಕೇಂದ್ರ ಸರ್ಕಾರದ ಕಟ್ಟಡಗಳಿಗೂ ತೆರಿಗೆ: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ರಾಜ್ಯ ಸರ್ಕಾರದ ಕಟ್ಟಡಗಳಿಂದ ಶೇ.25ರಷ್ಟು ತೆರಿಗೆ ಸಂಗ್ರಹಿಸಲಾಗಿದೆ. ಅದೇ ರೀತಿ ಕೇಂದ್ರ ಸರ್ಕಾರದ ರೈಲ್ವೆ ಮತ್ತು ಸೇನೆ ಹಾಗೂ ಇತರೆ ಸರ್ಕಾರಿ ಕಟ್ಟಡಗಳಿಂದರೂ ತೆರಿಗೆ ಸಂಗ್ರಹಿಸಲು ಕ್ರಮಕೈಗೊಳ್ಳಲಾಗಿದೆ. ಈ ಸಂಬಂಧ ಆಯಾ ಇಲಾಖೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿ ಮಾಡಲಾಗುವುದು.

ಕೇಂದ್ರ ಸರ್ಕಾರದ ಕಟ್ಟಡಗಳಿಂದ ಇದುವರೆಗೂ ಯಾವುದೇ ತೆರಿಗೆ ಸಂಗ್ರಹಿಸುತ್ತಿರಲಿಲ್ಲ. ಆದರೆ, ಪ್ರಕರಣವೊಂದರಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ಆದೇಶದಂತೆ ತೆರಿಗೆ ಸಂಗ್ರಹಿಸಲು ನಿರ್ಧರಿಸಲಾಗಿದ್ದು, ರಾಜ್ಯ ಸರ್ಕಾರದ ಕಟ್ಟಡಗಳಿಗಿಂತ ಹೆಚ್ಚಿನ ತೆರಿಗೆಯನ್ನು ಕೇಂದ್ರ ಸರ್ಕಾರದ ಕಟ‚rಡಗಳಿಂದ ಸಂಗ್ರಹಿಸಲಾಗುವುದು ಎಂದು ಅವರು ತಿಳಿಸಿದರು.

Advertisement

2015ರ ಲೆಕ್ಕ ಪರಿಶೋಧನೆ ವರದಿಯಲ್ಲಿ ಬಿಬಿಎಂಪಿಯ ಕೆಲ ಅಕ್ರಮಗಳ ಬಗ್ಗೆ ಉಲ್ಲೇಖೀಸಲಾಗಿದ್ದು, ಅಂತಹ ಅಕ್ರಮಗಳ ಬಗ್ಗೆ ಪರಿಶೀಲಿಸಲು ಸಮಿತಿಯಿದ್ದು, ಆ ಸಮಿತಿಯೇ ತೀರ್ಮಾನಕೈಗೊಳ್ಳಲಿದೆ. ಬಳಿಕ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದರು. ಕಟ್ಟಡಗಳ ಅವಶೇಷಗಳನ್ನು ಎಲ್ಲೆಂದರೆಲ್ಲಿ ಬಿಸಾಡುವವರಿಗೆ ವಿಧಿಸುವ ದಂಡದ ಮೊತ್ತವನ್ನು 5 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಜತೆಗೆ ಕಟ್ಟಡ ಅವಶೇಷ ವಿಲೇವಾರಿ ಸಮಸ್ಯೆ ಪರಿಹಾರಕ್ಕಾಗಿ ರಾಕ್‌ ಕ್ರೈಸ್ಟಲ್‌ ಕಂಪನಿಗೆ ಟೆಂಡರ್‌ ಕೊಡಲಾಗಿದೆ ಎಂದರು.

2,600 ಮಂದಿ ವಿರುದ್ಧ ಪ್ರಕರಣ: ಇದುವರೆಗೂ ರಸ್ತೆಯಲ್ಲಿ ಕಸ ಎಸೆಯುವ 2,600 ಮಂದಿಗೆ ದಂಡ ವಿಧಿಸಲಾಗಿದೆ. ಇದೀಗ ಅವರೆಲ್ಲರ ವಿರುದ್ಧ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗುವುದು. ಹಾಗೇ ಕಸ ಎಸೆಯುವವರನ್ನು ಪತ್ತೆಹಚ್ಚಲು 233 ಮಂದಿ ಮಾರ್ಷಲ್‌ಗ‌ಳ ನೇಮಕಕ್ಕೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಇವರೆಲ್ಲರಿಗೂ ಕಸ ಎಸೆಯುವ ವ್ಯಕ್ತಿಗಳ ಫೋಟೋ ಹಾಗೂ ಸ್ಥಳದಲ್ಲೇ ದಂಡ ವಿಧಿಸಿದ ರಸೀದಿ ಕೊಡುವ ಸೌಲ್ಯಭ್ಯ ಹೊಂದಿರುವ ಯಂತ್ರವನ್ನು ಕೊಡಲಾಗುವುದು. ಈ ಮಾರ್ಷಲ್‌ಗ‌ಳು ಪಾಳಿ ಲೆಕ್ಕದಲ್ಲಿ ಕೆಲಸ ಮಾಡಲಿದ್ದಾರೆ ಎಂದರು.

ಹೊಸ ಟೆಂಡರ್‌: ಕಸ ಸಂಗ್ರಹ ಮತ್ತು ವಿಲೇವಾರಿಗೆ ಈಗಾಗಲೇ ಹೊಸ ಟೆಂಡರ್‌ ಕರೆಯಲಾಗಿದೆ. ಹೊಸ ಟೆಂಡರ್‌ ಪಡೆದ ಕಂಪನಿಯವರು ಹಸಿ ಕಸ ಸಂಗ್ರಹ ಮಾತ್ರ ಮಾಡುತ್ತಾರೆ. ಒಣ ಸಂಗ್ರಹ ಮಾಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next