Advertisement

ಸರ್ಕಾರಕ್ಕೆ ಸಿದ್ದರಾಮಯ್ಯ ಬೆಂಬಲವಿದೆ

10:35 AM Jun 30, 2018 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮ್ಮಿಶ್ರ ಸರ್ಕಾರದ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

Advertisement

ಬಜೆಟ್‌ ಮಂಡನೆ ವಿಚಾರಕ್ಕೆ ಸಂಬಧಿಸಿದಂತೆ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದಾರೆ ಎಂಬ ವದಂತಿ ಬೆನ್ನಲ್ಲೇ, ಸಿಎಂ ಎಚ್‌.ಡಿ.ಕುಮಾರಸ್ವಾಮಿ ಈ ಟ್ವೀಟ್‌ ಮಾಡಿರುವುದು ಕುತೂಹಲ ಮೂಡಿಸಿದೆ.

“ಸಿಎಂ ಆಫ್ ಕರ್ನಾಟಕ’ ಟ್ವಿಟ್ಟರ್‌ ಖಾತೆಯಲ್ಲಿ ಶುಕ್ರವಾರ ಟ್ವೀಟ್‌ ಮಾಡಲಾಗಿದ್ದು, “ಸಿದ್ದರಾಮಯ್ಯ ಅವರು ಶಾಂತಿವನದಲ್ಲಿ ಮಾತನಾಡಿರುವುದು ರಾಜಕೀಯ ವಿಶ್ಲೇಷಣೆ. ಸಮ್ಮಿಶ್ರ ಸರ್ಕಾರದ ಬಗ್ಗೆ ಅವರಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ರಚನೆಯಲ್ಲಿ ಅವರ ಪಾತ್ರ ದೊಡ್ಡದಿದೆ. ಅವರು ಸದಾ ನಮ್ಮ ಬೆಂಬಲಕ್ಕಿರುತ್ತಾರೆ’ ಎಂಬ ವಿವರಣೆಯಿದೆ. ಈ ಮೂಲಕ ಸಿದ್ದರಾಮಯ್ಯ ಅವರು ಶಾಂತಿವನದಲ್ಲಿ ಲೋಕಾಭಿರಾಮವಾಗಿ ಆಡಿದ್ದ ಮಾತುಗಳಿಂದ ಎದ್ದಿದ್ದ ವಿವಾದ ತಿಳಿಗೊಳಿಸುವ ಪ್ರಯತ್ನವನ್ನು ಸಿಎಂ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next