Advertisement

ಡ್ರಗ್ ಮಾಫಿಯಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಒತ್ತಡಕ್ಕೂ ಮಣಿಯಲ್ಲ: ಸಿ.ಟಿ.ರವಿ

03:35 PM Sep 04, 2020 | Mithun PG |

ಚಿಕ್ಕಮಗಳೂರು: ಡ್ರಗ್ ಮಾಫಿಯಾ ಇವತ್ತು-ನಿನ್ನೆಯದ್ದಲ್ಲ. ಆಗಾಗ ನಿಯಂತ್ರಿಸುತ್ತಿದ್ದರು ಕೂಡ ಬೇರು ಸಮೇತ ಕಿತ್ತಾಕಲು ಸಾಧ್ಯವಾಗಿಲ್ಲ. ಈಗ ಸರ್ಕಾರ ಡ್ರಗ್ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

Advertisement

ಇದೀಗ 84ಕ್ಕೂ ಹೆಚ್ಚು ಜನರನ್ನು ವಿಚಾರಣೆ ಮಾಡುವ ಕೆಲಸ ಆರಂಭವಾಗಿದೆ. ಡ್ರಗ್ ಮಾಫಿಯಾ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಂಡಿಲ್ಲ. ಈ ಮಾಫಿಯಾ ಎಂಬುದು ಕೇವಲ ರಾಜ್ಯಕ್ಕೆ ಸೀಮಿತವಾಗಿಲ್ಲ, ಹೊರರಾಜ್ಯ, ಹೊರದೇಶಗಳ ಸಂಪರ್ಕ ಕೂಡ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ಮಾಫಿಯಾದ ಕೆಲವೆಡೆ ಭಯೋತ್ಪಾದಕರ ಜೊತೆ ತಳುಕು ಹಾಕಿಕೊಂಡಿದೆ. ಮತ್ತೂ ಕೆಲವೆಡೆ ರಾಜಕಾರಣಿಗಳ ಹೆಸರು ಕೇಳಿಬಂದಿದೆ. ಸಿನಿಮಾ ನಟ-ನಟಿಯರು ಕೂಡ ಇದರಿಂದ ಹೊರತಾಗಿಲ್ಲ. ಮಾಫಿಯಾದಲ್ಲಿ ಯಾರೇ ಇದ್ದರೂ ಸರಿಯೇ, ಗಂಭೀರವಾಗಿ ತನಿಖೆಯಾಗುತ್ತದೆ.

ಯುವ ಜನರನ್ನು ಈ ಪಿಡುಗಿನಿಂದ ಮುಕ್ತಗೊಳಿಸಬೇಕೆಂಬ ಜವಾಬ್ದಾರಿ ಸರ್ಕಾರದ ಮೇಲಿದೆ. ತನಿಖೆ ತಂಡದ ಮೇಲೆ ಒತ್ತಡ ತರುವಂತಹ ಕೆಲಸ ನಡೆಯುತ್ತಿದೆ. ಸರ್ಕಾರ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಸಿ.ಟಿ ರವಿ ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next