ಮೈಸೂರು: ಅಧಿವೇಶನ ಕರೆಯಲು ಸರ್ಕಾರಕ್ಕೆ ಭಯವಿದೆ. ತಮ್ಮ ಬಣ್ಣ ಬಯಲಾಗುವ ಹೆದರಿಕೆ ಸರ್ಕಾರಕ್ಕಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ತುರ್ತಾಗಿ ರಾಜ್ಯದಲ್ಲಿ ವಿಧಾನಸಭಾ ಅಧಿವೇಶನ ಕರೆಯಬೇಕು.ಇಂತಹ ತುರ್ತು ಪರಿಸ್ಥಿತಿಯಲ್ಲಿ ಅಧಿವೇಶನ ಕರೆಯದೆ ಇನ್ನು ಯಾವ ಸಂದರ್ಭದಲ್ಲಿ ಅಧಿವೇಶನ ಕರೆಯುತ್ತಾರೆ ? ವಿರೋಧ ಪಕ್ಷಗಳನ್ನು ಎದುರಿಸಲು ಆಡಳಿತ ಪಕ್ಷಕ್ಕೆ ಭಯವಿದೆ. ಹೀಗಾಗಿಯೇ ಅಧಿವೇಶನ ಕರೆಯುತ್ತಿಲ್ಲ ಎಂದರು.
ಪ್ರಜಾಪ್ರಭುತ್ವದ ಮೇಲೆ ಅವರಿಗೆ ನಂಬಿಕೆ ಇದ್ದರೆ ಅಧಿವೇಶನ ಕರೆಯಬೇಕು. ನಾನು ಈಗಲು ಆಗ್ರಹ ಮಾಡುತ್ತೇನೆ. ತುರ್ತಾಗಿ ಮುಂಗಾರು ಅಧಿವೇಶನ ಕರೆಯಿರಿ ಎಂದರು ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ:ನಾನು ಮನೆಯವನೇ.. ಮೂಲ-ವಲಸಿಗ ಪ್ರಶ್ನೆಯೇ ಇಲ್ಲ: ಕಾಂಗ್ರೆಸ್ ಸಿಎಂ ವಿಚಾರಕ್ಕೆ ಸಿದ್ದರಾಮಯ್ಯ
ಯೂತ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದ ಗೊಂದಲದ ಬಗ್ಗೆ ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಅದು ಪ್ರತ್ಯೇಕವಾದ ವ್ಯವಸ್ಥೆ. ಆದರೂ ನಾನು ಸಲಹೆ ಕೊಟ್ಟಿದ್ದೆ.ಬಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ ಆಯ್ಕೆಯಾಗಿದೆ. ಹೊಂದಾಣಿಕೆಯಿಂದ ಒಬ್ಬರನ್ನು ನೇಮಿಸಿ ಎಂದು ಹೇಳಿದ್ದೆ ಎಂದರು.
ಇದರಲ್ಲಿ ನನ್ನದಾಗಲಿ ಡಿಕೆ ಶಿವಕುಮಾರ್ ಅವರದ್ದಾಗಲಿ ಪಾತ್ರ ಇರುವುದಿಲ್ಲ. ಈ ವಿಚಾರದಲ್ಲಿ ಗೊಂದಲಗಳು ಬೇಡ ಎಂದು ಸಿದ್ದರಾಮಯ್ಯ ಹೇಳಿದರು