Advertisement
ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ ಸಿಬ್ಬಂದಿಗಳ ಬಗ್ಗೆ ನನಗೆ ಮತ್ತು ನಮ್ಮ ಸರ್ಕಾರಕ್ಕೆ ಯಾವತ್ತೂ ಸಹಾನುಭೂತಿ ಇದೆ. ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದರೂ ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಎಲ್ಲಾ ಸಿಬ್ಬಂದಿಗಳಿಗೆ ಯಾವುದೇ ಕಡಿತವಿಲ್ಲದೇ ಸಂಬಳ ನೀಡಿದ್ದು ಇದಕ್ಕೆ ನಿದರ್ಶನವಾಗಿದೆ.
Related Articles
Advertisement
ಇಂತಹ ಬೆಳವಣಿಗೆಗಳಿಂದ ಸಾರಿಗೆ ಸಂಸ್ಥೆಗಳ ನೌಕರರಿಗೆ ದೊಡ್ಡ ಹಾನಿಯಾಗುವುದಲ್ಲದೇ ಸಾರ್ವಜನಿಕರಿಗೆ ಅನವಶ್ಯಕವಾಗಿ ತೊಂದರೆ ಉಂಟಾಗುವುದಕ್ಕೆ ಕಾರಣವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸಾರಿಗೆ ಮಿತ್ರರು ಸರ್ಕಾರದೊಂದಿಗೆ ಪರಸ್ಪರ ಸಹಕಾರದೊಂದಿಗೆ ತಮ್ಮ ದೈನಂದಿನ ಕರ್ತವ್ಯ ಮುಂದುವರೆಸಬೇಕೆಂದು ನಾನು ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ.
ಸಾರಿಗೆ ಸಿಬ್ಬಂದಿಗಳೆಂದರೆ ನನಗೆ ನನ್ನ ಕುಟುಂಬವಿದ್ದಂತೆ, ಅವರ ಸಂಕಷ್ಟಗಳಿಗೆ ಸ್ಪಂದಿಸಲು ನಾನು ಸದಾ ಸಿದ್ಧ. ಹಿಂದೆಯೂ ಅನೇಕ ಸಂದರ್ಭಗಳಲ್ಲಿ ಇದನ್ನು ಸಾರಿಗೆ ಸಿಬ್ಬಂದಿಗಳು ಮನಗಂಡಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳೂ ಸಹ ಸಾರಿಗೆ ಇಲಾಖೆಯ ಎಲ್ಲಾ ನೌಕರರ ಬೇಡಿಕೆಗಳ ಬಗ್ಗೆ ಉದಾರವಾಗಿ ನಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಮುಂದೆಯೂ ನಮ್ಮ ಸಾರಿಗೆ ಸಿಬ್ಬಂದಿಗಳು ತಮ್ಮ ಬೇಡಿಕೆಗಳನ್ನು ತಿಳಿಸಬೇಕೆಂದರೆ ನನ್ನ ಬಳಿ ಬರುವುದಕ್ಕೆ ಸದಾ ಮುಕ್ತ ಅವಕಾಶವಿದೆ. ಈ ಬಗ್ಗೆ ಯಾವುದೇ ಆತಂಕ ಬೇಡ. ನಮ್ಮ ಸಾರಿಗೆ ಒಕ್ಕೂಟಗಳು ಮತ್ತು ಸಿಬ್ಬಂದಿಗಳು ನನ್ನನ್ನು ಭೇಟಿ ಮಾಡಿ ತಮ್ಮ ಕಷ್ಟಸುಖಗಳನ್ನು ಹೇಳಿಕೊಳ್ಳುವುದಕ್ಕೆ ಸದಾ ಸ್ವಾಗತವಿದೆ ಎಂದು ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಕೃಷಿ ಕಾಯ್ದೆ ವಿರೋಧಿಸಿ ಡಿ.14ರಂದು ರೈತ ಮುಖಂಡರಿಂದ ಉಪವಾಸ ಸತ್ಯಾಗ್ರಹ: ವರದಿ