ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೋವಿ ಸಮುದಾಯದ ಅಭಿವೃದ್ಧಿಗೆ ಸಂಪೂರ್ಣ ಬದ್ಧವಾಗಿದೆ ಎಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದ ಲಿಂಗಾಂಬುದಿ ಪಾಳ್ಯದಲ್ಲಿ ನಡೆದ ಉರಿಕಾಳೇಶ್ವರಿ ಅಮ್ಮನವರ ದೇವಸ್ಥಾನದ 12ನೇ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೋವಿ ಸಮಾಜದವರು 1983ರಿಂದಲೂ ಬೆಂಬಲಿಸಿಕೊಂಡು ಬಂದಿದ್ದಾರೆ. ಆದ್ದರಿಂದಲೇ ಬೋವಿ ಸಮಾಜದ ಅಭಿವೃದ್ಧಿಗಾಗಿಯೇ ರಾಜ್ಯ ಬೋವಿ ನಿಗಮ ಸ್ಥಾಪಿಸಿ ಅನುದಾನ ಬಿಡುಗಡೆ ಮಾಡಲಾಗಿದೆ.
ಮೈಸೂರಿನವರೇ ಆದ ಜಿ.ವಿ. ಸೀತಾರಾಂ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಈ ಹಿಂದೆ ಮೈಸೂರು ಜಿಪಂ ಅಧ್ಯಕ್ಷರನ್ನಾಗಿ ಎಂ.ಪಿ.ನಾಗರಾಜ್ ಮಾಡಿದ್ದರು. ಹೀಗಾಗಿ ನಿಗಮದಿಂದ ದೊರೆಯುವ ಸೌಲಭ್ಯವನ್ನು ಉಪಯೋಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಲಿಂಗಾಂಬುದಿ ಪಾಳ್ಯ ಹಾಗೂ ಸುತ್ತಮುತ್ತಲ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು 3.5 ಕೋಟಿ ಬಿಡುಗಡೆ ಮಾಡಲಾಗಿದೆ. ಸಿದ್ದರಾಮೇಶ್ವರ ವೃತ್ತ ಹಾಗೂ ಸಿದ್ದರಾಮೇಶ್ವರ ಸಮುದಾಯ ಭವನದ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸುತ್ತೇನೆಂದರು.
ಅಲ್ಲದೆ, ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದ ಅವರು, ಉರಿಕಾಳೇಶ್ವರಿ ತಾಯಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು. ಮಾಜಿ ಶಾಸಕ ಎಂ.ಸತ್ಯನಾರಾಯಣ, ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ರಾಜ್ಯ ಬೋವಿ ನಿಗಮದ ಅಧ್ಯಕ್ಷ ಜಿ.ವಿ.ಸೀತಾರಾಂ, ಜಿಪಂ ಸದಸ್ಯ ಎಂ.ಪಿ.ನಾಗರಾಜ್, ಮಾಜಿ ಸದಸ್ಯ ಎಂಟಿ ಕುಮಾರ್,
-ಚಾಮುಂಡೇಶ್ವರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮಾಶಂಕರ್, ನಜರ್‌ಬಾದ್ ನಟರಾಜ್, ಮರಳೂರು ಗ್ರಾಪಂ ಅಧ್ಯಕ್ಷ ಮಹೇಶ್‌ಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಯ್ಯ, ಗ್ರಾಪಂ ಸದಸ್ಯ ಬಂಗಾರಪ್ಪ, ಮುಖಂಡರಾದ ನಾಗರಾಜು, ಸಿದ್ದರಾಮಣ್ಣ, ಟಿ.ಗಿರಿಸ್ವಾಮಿ, ಪಿ.ಮಲ್ಲಯ್ಯ, ಬಸವರಾಜು, ಪುಟ್ಟಣ್ಣ, ಸಿ.ಟಿ.ರಾಜು, ಸಿ.ದಾಸಣ್ಣ, ಚಿಕ್ಕಬೋವಿ ಇದ್ದರು.