Advertisement
ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸಂಘ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ “ಮಕ್ಕಳ ಹಬ್ಬ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು ಹಲವಾರು ಸೌಲಭ್ಯ ಒದಗಿಸಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ಯಾವುದೇ ರೀತಿಯಲ್ಲಿ ಆರ್ಥಿಕವಾಗಿ ಹೊರೆಯಾಗುತ್ತಿಲ್ಲ. ಶಿಕ್ಷಕರು ನೀಡುವ ಶಿಕ್ಷಣವನ್ನು ಮಕ್ಕಳು ಶ್ರದ್ಧೆಯಿಂದ ಕಲಿಯಬೇಕು. ಎಲ್ಲಾ ಸಮುದಾಯದ ಮಕ್ಕಳಿಗೂ ಸಮಾನ ಶಿಕ್ಷಣ ನೀಡುವಲ್ಲಿ ಶಿಕ್ಷಣ ಇಲಾಖೆ ಸದಾ ಮುಂದಿದೆ ಎಂದು ತಿಳಿಸಿದರು.
ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಸ್. ನಾಗೇಂದ್ರಪ್ಪ ಮಾತನಾಡಿ, 2003-04ನೇ ಸಾಲಿನಲ್ಲಿ ಮೊರಾರ್ಜಿ ಶಾಲೆಗಳು ಪ್ರಾರಂಭವಾಗಿವೆ. ಈ ಶಾಲೆಯಲ್ಲಿ 2010-11ನೇ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅವಕಾಶ ದೊರೆತಿದೆ. ಅಲ್ಲಿಂದ ಇಲ್ಲಿಯ ತನಕ ಪ್ರತಿ ವರ್ಷ ಮಕ್ಕಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗುತ್ತಿದ್ದು, ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸುತ್ತಿದ್ದಾರೆಂದರು. ಶಿಕ್ಷಕ ಪಾತಲಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಮೊರಾರ್ಜಿ ಶಾಲೆ ಪ್ರತಿವರ್ಷ ಉತ್ತಮ ಫಲಿತಾಂಶ ಪಡೆಯುತ್ತಿದೆ. ಕ್ರೀಡಾ ಸ್ಪರ್ದೆಗಳಲ್ಲೂ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಬಿ.ಟಿ. ರಮೇಶ್ ಗೌಡ, ಪಶುವೈದ್ಯ ಇಲಾಖೆಯ ಡಾ| ಹನುಮಪ್ಪ, ಗ್ರಾಪಂ ಸದಸ್ಯ ಶಿವಣ್ಣ, ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ನಾಗರಾಜ, ವೆಂಕಟೇಶ್, ಮುರುಗೇಶಪ್ಪ, ಜಗದೀಶ್ ಬಾಗವಹಿಸಿದ್ದರು. ಬಸವರಾಜು ಪ್ರಾರ್ಥಿಸಿದರು. ರವಿಕುಮಾರ್ ವಂದಿಸಿದರು.