Advertisement

ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ

07:18 AM Jun 09, 2019 | Team Udayavani |

ಮುದಗಲ್ಲ: ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದರೂ ಮೈತ್ರಿ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದರು.

Advertisement

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ರಾಮಜೀ ನಾಯಕ್‌ ತಾಂಡಾದಲ್ಲಿ ಶನಿವಾರ ಬರ ಅಧ್ಯಯನ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರಕಾರಕ್ಕೆ ಯಾವುದೇ ಬದ್ಧತೆಯಿಲ್ಲ. ರಾಜ್ಯದಲ್ಲಿ ಬರವಿದ್ದರೂತಲೆ ಕೆಡಿಸಿಕೊಳ್ಳುತ್ತಿಲ್ಲ.

ಜನರು ಅನುಭವಿಸುತ್ತಿರುವ ಕಷ್ಟ, ತೊಂದರೆ ಸರ್ಕಾರಕ್ಕೆ ಕಾಣುತ್ತಿಲ್ಲ. ರೈತರ ಸಾಲಮನ್ನಾ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಅ ಧಿಕಾರಿಗಳು ಬೇಕಾಬಿಟ್ಟಿ ಕೆಲಸ ಮಾಡುತ್ತಿದ್ದು, ಜನರ ಸಮಸ್ಯೆಯನ್ನು ಕೇಳುವವರೇ ಇಲ್ಲ. ಈ ಕುರಿತು ಅಧಿ ವೇಶನದಲ್ಲಿ ಚರ್ಚಿಸುತ್ತೇನೆ ಎಂದರು.

ಬಿಜೆಪಿ ಮಾಧ್ಯಮದ ಪರವಿದೆ. ನೀವು ಭಯ ಪಡಬೇಡಿ. ಮಾಧ್ಯಮಗಳ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ ಬಗ್ಗೆ ಅ ಧಿವೇಶನದಲ್ಲಿ ಚರ್ಚಿಸುವುದಾಗಿ ತಿಳಿಸಿದರು. ಸಂಸದ ರಾಜಾ ವೆಂಕಟೇಶ್ವರ ನಾಯಕ, ಶಾಸಕರಾದ ರಾಜಾ ನರಸಿಂಹ ನಾಯಕ, ಶಿವರಾಜ ಪಾಟೀಲ, ಗೋವಿಂದ ಕಾರಜೋಳ, ದೊಡ್ಡನಗೌಡ ಪಾಟೀಲ, ಮಾಜಿ ಶಾಸಕ ಮಾನಪ್ಪ ವಜ್ಜಲ್‌, ಲಕ್ಷ್ಮಣ ಸೌದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next