Advertisement

ಟ್ರಾಫಿಕ್‌ ಹೆಚ್ಚಲು ಸರ್ಕಾರ ಕಾರಣ

11:45 AM May 04, 2018 | Team Udayavani |

ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಾರಾಯಣಸ್ವಾಮಿ, ಬಿನ್ನಿಪೇಟೆಯಲ್ಲಿ ರ್ಯಾಲಿ ನಡೆಸುವ ಮೂಲಕ ಗುರುವಾರ ಪ್ರಚಾರ ನಡೆಸಿದರು.ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

Advertisement

ಬೆಂಗಳೂರು ನಗರ ಹಾಗೂ ಗಾಂಧಿನಗರದಲ್ಲಿ ಹದಗೆಟ್ಟ ರಸ್ತೆಗಳ ಪರಿಣಾಮ ದಿನೆ ದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆಯಿಂದ ನಾಗರಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕಳೆದ ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರ ಸಂಚಾರ ದಟ್ಟಣೆ ನಿವಾರಿಸಲು ಯಾವುದೇ ರೀತಿಯಲ್ಲಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳದೆ ಜವಾಬ್ದಾರಿಯಿಂದ ನುಣಚಿಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. 

ಬೆಂಗಳೂರು ನಗರದಲ್ಲಿ ದ್ವಿಚಕ್ರ ವಾಹನ ಹಾಗೂ ಕಾರು ಸಹಿತ 50 ಲಕ್ಷಕ್ಕೂ ಅಧಿಕ ವಾಹನಗಳಿವೆ. ರಾಜ್ಯ ಸರಕಾರ ಪರಿಣಾಮಕಾರಿಯಾಗಿ ಸಮೂಹ ಸಾರಿಗೆ ಸೌಲಭ್ಯ ಕಲ್ಪಿಸದೆ ಇರುವುದರಿಂದ ಸಂಚಾರಿ ದಟ್ಟಣೆ ಸಮಸ್ಯೆ ಉಲ್ಬಣವಾಗಲು ಕಾರಣವಾಗಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲು ಈ ಬಾರಿ ಶಾಸಕನಾಗಿ ಆಯ್ಕೆ ಮಾಡುವಂತೆ ಕೋರಿದರು.  ಜೆಡಿಎಸ್‌ ಮುಖಂಡ ಹಾಗೂ ಪಾಲಿಕೆ ಮಾಜಿ ಸದಸ್ಯ ಮಶ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next