Advertisement

ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ಧ: ಕಾಗೋಡು

03:45 AM Jan 27, 2017 | |

ಶಿವಮೊಗ್ಗ: ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲೂ ಸಿದ್ಧತೆ ಕೈಗೊಂಡಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಬೆಳೆ ನಷ್ಟಕ್ಕೆ ಪರಿಹಾರ, ಕುಡಿವ ನೀರು, ಜಾನುವಾರುಗಳಿಗೆ ಮೇವು, ಗುಳೆ ಹೋಗದಂತೆ ತಡೆಯಲು ಕಾರ್ಮಿಕರಿಗೆ ಉದ್ಯೋಗ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ಬಗರ್‌ ಹುಕುಂ ಕಾಯ್ದೆಯಡಿ ಸಲ್ಲಿಕೆಯಾಗಿದ್ದ ಸಾಕಷ್ಟು ಅರ್ಜಿಗಳು ಬಾಕಿ ಉಳಿದಿದ್ದವು. ಇದನ್ನು ಪರಿಹರಿಸಲು ಸರ್ಕಾರದಿಂದ ಈಗಾಗಲೇ ಸೂಚನೆ ನೀಡಲಾಗಿದೆ. ಜತೆಗೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಅರಣ್ಯ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಸರ್ಕಾರದಿಂದ ಸೂಚನೆ ಬರಲಿದೆ ಎಂದರು.

ಮಂಜೂರಾತಿ ಇಲ್ಲದೇ ಸರ್ಕಾರಿ ಜಾಗಗಳಲ್ಲಿ ನಿರ್ಮಾಣಗೊಂಡ ಮನೆ ಸಕ್ರಮಗೊಳಿಸಲು ನಗರ ಹಾಗೂ ಗ್ರಾಮೀಣ ಪ್ರದೇಶದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿತ್ತು. 2016ರ ಡಿಸೆಂಬರ್‌ ಅಂತ್ಯದೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿತ್ತು. ಇದೀಗ 94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಫೆ.21 ಹಾಗೂ 94ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಫೆ. 27ರವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next