Advertisement

ಉಕ್ರೇನ್ ನಿಂದ ವಾಪಸ್ಸಾಗುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಸರಕಾರ ಗಂಭೀರ ಚಿಂತನೆ

03:41 PM Feb 28, 2022 | Team Udayavani |

ಬೆಂಗಳೂರು: ಉಕ್ರೇನಿನಿಂದ ರಾಜ್ಯಕ್ಕೆ ಹಿಂದಿರುಗುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ರಾಜ್ಯ ಮತ್ತು ಕೇಂದ್ರ ಸರಕಾರಗಳ ಮಟ್ಟದಲ್ಲಿ ಮಾತುಕತೆ ನಡೆಸಿ, ಸೂಕ್ತ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.

Advertisement

ಸೋಮವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಉಕ್ರೇನಿನಿಂದ ವಾಪಸ್ಸಾಗಿರುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಮತ್ತು ಪದವಿ ಶಿಕ್ಷಣ ವ್ಯವಸ್ಥೆ ಮಾಡಲು ಯಾವ ತೊಂದರೆಯೂ ಇಲ್ಲ. ಆದರೆ, ಅಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದವರಿಗೆ ಇಲ್ಲಿ ವ್ಯವಸ್ಥೆ ಕಲ್ಪಿಸಲು ಕೆಲವು ಮಿತಿಗಳಿವೆ,’ ಎಂದರು.

ಈ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಸರಕಾರ ಗಂಭೀರವಾಗಿ ಚಿಂತಿಸುತ್ತಿದೆ. ಇದಕ್ಕಾಗಿ ಇನ್ನು ಕೆಲವೇ ದಿನಗಳಲ್ಲಿ ಮಾತುಕತೆ ಪ್ರಕ್ರಿಯೆ ಆರಂಭಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಮಕ್ಕಳ ಬಗ್ಗೆ ಕಳಕಳಿ ಹೊಂದಿದ್ದಾರೆ ಎಂದು ಅವರು ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next