Advertisement

ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ

10:58 PM Feb 17, 2020 | Lakshmi GovindaRaj |

ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಪರಿಹಾರ ಮತ್ತು ಪುನರ್‌ವಸತಿ ವಿಚಾರದಲ್ಲಿ ಸರ್ಕಾರವು ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ವಾಸ್ತವಾಂಶವೇ ಬೇರೆ, ಬೆಳೆನಾಶಕ್ಕೆ ಪರಿಹಾರ ಸಿಕ್ಕಿಲ್ಲ, ಮನೆ ಕಟ್ಟಲು ಹಣ ನೀಡಿಲ್ಲ, ಜನರ ಬದುಕು ದುಸ್ತರವಾಗಿದೆ ಎಂದರು.

Advertisement

ಆರು ತಿಂಗಳಾದರೂ ಸರ್ಕಾರ ಉಳಿಸಿಕೊಳ್ಳಲು ಕಸರತ್ತುಗಳನ್ನು ನಡೆಸುತ್ತಿರುವ ಯಡಿಯೂರಪ್ಪ ಅವರು ರಾಜ್ಯದ ಅಭಿವೃದ್ಧಿ, ಆರ್ಥಿಕ ಪರಿಸ್ಥಿತಿ, ಜನರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರದ ಬಗ್ಗೆ ರಾಜ್ಯಪಾಲರಿಂದ ಪೊಳ್ಳು ಭಾಷಣ ಮಾಡಿಸಿದ್ದಾರೆ. ಕಾಂಗ್ರೆಸ್‌ ಹಾಗೂ ಸಮ್ಮಿಶ್ರ ಸರ್ಕಾರದ ಕಾರ್ಯಕ್ರಮಗಳೇ ರಾಜ್ಯಪಾಲರ ಭಾಷಣದಲ್ಲಿದೆ ಎಂದು ಹೇಳಿದರು.

ಟ್ವೀಟ್‌ ಮೂಲಕವೂ ಈ ಬಗ್ಗೆ ಪ್ರಸ್ತಾಪಿಸಿರುವ ಸಿದ್ದರಾಮಯ್ಯ, ನಮ್ಮ ಐದು ವರ್ಷಗಳ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ಭಾಷಣದ ಮೂಲಕ ಗುರುತಿಸಿ , ಶ್ಲಾ ಸಿದ ಮತ್ತು ತಮ್ಮ ಸರ್ಕಾರದ ಸಾಧನೆಯ ಬಗ್ಗೆ ಹೇಳಿಕೊಳ್ಳಲು ಏನೂ ಇಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡ ಬಿಜೆಪಿ ಸರ್ಕಾರಕ್ಕೆ ಧನ್ಯವಾದಗಳು ಎಂದು ಕುಟುಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next