Advertisement

Manipur ಶಾಂತಿ ಸ್ಥಾಪನೆಗೆ ಹರಸಾಹಸ: ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸಮಿತಿ

02:49 PM Jun 10, 2023 | Team Udayavani |

ಹೊಸದಿಲ್ಲಿ: ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಶತಪ್ರಯತ್ನ ನಡೆಸುತ್ತಿರುವ ಕೇಂದ್ರ ಸರಕಾರ ಮಣಿಪುರ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಶಾಂತಿ ಸಮಿತಿಯನ್ನು ರಚಿಸಿದೆ.

Advertisement

ಸಮಿತಿಯ ಸದಸ್ಯರಲ್ಲಿ ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಕೆಲವು ಸಚಿವರು, ಸಂಸದರು, ಶಾಸಕರು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದ್ದಾರೆ. ಸಮಿತಿಯು ಮಾಜಿ ನಾಗರಿಕ ಸೇವಕರು, ಶಿಕ್ಷಣ ತಜ್ಞರು, ಸಾಹಿತಿಗಳು, ಕಲಾವಿದರು, ಸಾಮಾಜಿಕ ಕಾರ್ಯಕರ್ತರು ಮತ್ತು ವಿವಿಧ ಜನಾಂಗೀಯ ಗುಂಪುಗಳ ಪ್ರತಿನಿಧಿಗಳನ್ನು ಸಹ ಒಳಗೊಂಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

ಸಮಿತಿಯ ಆದೇಶವು ರಾಜ್ಯದ ವಿವಿಧ ಜನಾಂಗೀಯ ಗುಂಪುಗಳ ನಡುವೆ ಶಾಂತಿಯುತ ಸಂವಾದ, ಗುಂಪುಗಳ ನಡುವಿನ ಮಾತುಕತೆಗಳನ್ನು ಒಳಗೊಂಡಂತೆ ಶಾಂತಿ ಸ್ಥಾಪನೆ ಪ್ರಕ್ರಿಯೆಯನ್ನು ಸುಲಭಗೊಳಿಸುವ ಕೆಲಸ ಮಾಡಲಿದೆ.

ಸಾಮಾಜಿಕ ಒಗ್ಗಟ್ಟು, ಪರಸ್ಪರ ತಿಳುವಳಿಕೆಯನ್ನು ಬಲಪಡಿಸಬೇಕು ಮತ್ತು ವಿವಿಧ ಜನಾಂಗೀಯ ಗುಂಪುಗಳ ನಡುವೆ ಸೌಹಾರ್ದಯುತ ಸಂವಹನವನ್ನು ಸುಗಮಗೊಳಿಸಬೇಕು ಎಂದು ಗೃಹ ಸಚಿವಾಲಯ ಹೇಳಿದೆ.

ಮೀಟೈ ಮತ್ತು ಕುಕಿ ಜನಾಂಗದ ನಡುವೆ ನಡೆದ ಜನಾಂಗೀಯ ಸಂಘರ್ಷದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು ಸಿಬಿಐ ಕೂಡ ತನಿಖೆ ನಡೆಸುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next