ಮಂಡ್ಯ: ಸರ್ಕಾರ ಮಂಡ್ಯ ಜಿಲ್ಲೆಯ ಸಮಸ್ಯೆ ಬಗ್ಗೆ ಸ್ಪಂದಿಸಬೇಕೆಂದು ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡುತ್ತಾ ಜನಪ್ರತಿನಿಧಿಗಳ ಸಭೆ ಕರೆಯಬೇಕು , ಜಿಲ್ಲೆಯಲ್ಲಿ ಬೆಳೆದ ಕಬ್ಬು ಸಾಗಾಣಿಕೆಗೆ ಕ್ರಮ ಕೈಗೊಳ್ಳಬೇಕು, ರೈತರು ಬೀದಿಗೆ ಇಳಿಯುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
ಕಳೆದ ವಾರ ಜಿಲ್ಲಾಧಿಕಾರಿ ಸಭೆ ಕರೆಯಬೇಕೆಂದು ಒತ್ತಾಯ ಮಾಡಿದ್ದೇವೆ. ಜೂನ್ 10 ರಂದು ಹೆಚ್ಡಿಕೆ ನೇತೃತ್ವದಲ್ಲಿ ರೈತ ನಾಯಕರ ಸಭೆ ಮಾಡಲಾಗಿತ್ತು.
ಈ ಬಾರಿ ಮೈಶುಗರ್ ಆರಂಭಕ್ಕೆ ತೀರ್ಮಾನ ಮಾಡಲಾಗಿತ್ತು ಹಾಗೂ ಕಾರ್ಖಾನೆ ಅಭಿವೃದ್ಧಿಗೆ 165 ಕೋಟಿ ರೂ.ಗೆ ಬೇಡಿಕೆ ಇಡಲಾಗಿತ್ತು ಶೀಘ್ರವಾಗಿ ಹಣ ಬಿಡುಗಡೆ ಮಾಡಬೇಕು. PSSK ಕಾರ್ಖಾನೆಯನ್ನ ಖಾಸಗಿಯವರಿಗೆ ಲೀಸ್ ಗೆ ಕೊಡುವ ತೀರ್ಮಾನ ಶೀಘ್ರ ಆಗಬೇಕು ಹಾಗೂ ಕಬ್ಬಿನ ಬಾಕಿ ಹಣ ಪಾವತಿಗೆ ಡಿಸಿ ಕ್ರಮ ಕೈಗೊಳ್ಳಬೇಕು, ಹೊರ ಜಿಲ್ಲೆಗೆ ಸಾಗಿಸುವ ಕಬ್ಬಿನ ಸಾಗಾಣಿಕೆ ವೆಚ್ಚವನ್ನು ಸರ್ಕಾರ ಬರಿಸಬೇಕು.
ಸಿಎಂ ಯಡಿಯೂರಪ್ಪ ಮಂಡ್ಯ ಜಿಲ್ಲೆಯವರು ಮಂಡ್ಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗುವ ವಿಶ್ವಾಸ ಇದೆ ಎಂದು ತಿಳಿಸಿದರು.