Advertisement
ಇಲ್ಲಿನ ದಾವಣಗೆರೆ ರಸ್ತೆಯ ಯೂನಿಯನ್ ಪಾರ್ಕ್‌ನಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಸಿಯೂಟ ಪೂರೈಕೆಯನ್ನು ಖಾಸಗಿ ಸಂಸ್ಥೆಗೆ ವಹಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಖಾಸಗಿಗೆ ವಹಿಸುವ ನಿರ್ಧಾರ ಕೈಬಿಡಿಈ ಹಿಂದೆ ರಾಜ್ಯ ಸರ್ಕಾರ ನೀಡಿದ ಭರವಸೆಯಂತೆ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸಬೇಕು. ಬಿಸಿಯೂಟ ಪೂರೈಕೆಯನ್ನು ಖಾಸಗಿಯವರಿಗೆ ವಹಿಸಿದರೆ ರಾಜ್ಯದಲ್ಲಿರುವ ಒಂದು ಲಕ್ಷ ಹದಿನೆಂಟು ಸಾವಿರ ಬಿಸಿಯೂಟ ತಯಾರಕರು ಬೀದಿಗೆ ಬೀಳಬೇಕಾಗುತ್ತದೆ. ಅದಕ್ಕಾಗಿ ಇಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು ಗುಡುಗಿದರು. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ
ಹೊಸದುರ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಿಸಿಯೂಟ ಸಹಾಯಕಿಯರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದರು. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಳೆದ 16 ವರ್ಷಗಳಿಂದ ಅಕ್ಷರ ದಾಸೋಹ ಬಿಸಿಯೂಟ ಯೋಜನೆಯಲ್ಲಿ 1.18 ಲಕ್ಷ ಜನರು ಮುಖ್ಯ ಅಡುಗೆಯವರಾಗಿ ಮತ್ತು ಸಹಾಯಕ ಅಡುಗೆಯವರಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯ ಕೆಲಸ ಭದ್ರತೆಯಾಗಲೀ, ಜೀವನ ಭದ್ರತೆಯಾಗಲೀ, ನಿವೃತ್ತಿ ವೇತನವಾಗಲೀ, ಸಾವು ನೋವಿಗೆ ಪರಿಹಾರವಾಗಲೀ ಸರಕಾರದಿಂದ ಇದುವರೆಗೂ ದೊರೆತಿಲ್ಲ. ಕೆಲಸವನ್ನು ಕಾಯಂಗೊಳಿಸದೆ ಗೌರವ ಸಂಭಾವನೆ ಹೆಸರಿನಲ್ಲಿ ಸರಕಾರ ಶೋಷಣೆ ಮಾಡುತ್ತಿದೆ. ಮಾಸಿಕ ಗೌರವ ಸಂಭಾವನೆ ಮುಖ್ಯ ಅಡುಗೆಯವರಿಗೆ 2700 ರೂ. ಹಾಗೂ ಸಹಾಯಕ ಅಡುಗೆಯವರಿಗೆ 2600 ರೂ. ನೀಡಲಾಗುತ್ತಿದೆ. ಈ ಗೌರವ ಸಂಭಾವನೆಯಲ್ಲಿ ಬಿಸಿಯೂಟ ತಯಾರಕರು ಜೀವನ ನಡೆಸಲು ಕಷ್ಟವಾಗುತ್ತಿದೆ. ಆದ್ದರಿಂದ ಸರಕಾರ ಎಲ್ಲಾ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬಿಸಿಯೂಟ ತಯಾರಕರಿಗೆ ಕೇಂದ್ರ ಸರಕಾರ ಕನಿಷ್ಠ ವೇತನ 18,000 ರೂ. ನೀಡಬೇಕು. ಕೆಲಸ ಮತ್ತು ಜೀವನ ಭದ್ರತೆಗಾಗಿ ತಮಿಳುನಾಡು ಮಾದರಿಯಲ್ಲಿ ಸವಲತ್ತುಗಳು ಹಾಗೂ ಪಿಎಫ್, ಕಾರ್ಮಿಕರ ಆರೋಗ್ಯ ವಿಮೆ ಜಾರಿಗೆ ತರಬೇಕು ಎಂದರು. ಎಐಟಿಯುಸಿ ಅಧ್ಯಕ್ಷ ಕೆ.ಎನ್. ರಮೇಶ್, ಕಾರ್ಯದರ್ಶಿ ವಸಂತಬಾಯಿ, ಉಪಾಧ್ಯಕ್ಷೆ ಶಿವಮ್ಮ, ದಾಕ್ಷಾಯಣಮ್ಮ, ಓಂಕಾರಮ್ಮ, ಭಾರತಮ್ಮ, ಸುನೀತಾಬಾಯಿ, ಅಂಬಿಕಾ, ರತ್ನಮ್ಮ, ಜಯಮ್ಮ, ಗಾಯತ್ರಮ್ಮ, ಗಂಗಮ್ಮ, ಕೆಂಚಮ್ಮ, ಶಾರದಮ್ಮ, ಸುನಂದಮ್ಮ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.