ಕೆ.ಎಸ್. ಈಶ್ವರಪ್ಪ, “ನನ್ನ ಹೇಳಿಕೆ ತಿರುಚಲಾಗಿದೆ. ಸಿಎಂ ನೆಗೆದು
ಬೀಳುತ್ತಾರೆ ಎಂದು ನಾನು ಹೇಳಿಲ್ಲ. ಸರ್ಕಾರ ನೆಗೆದು ಬೀಳಲಿದೆ ಎಂದು
ಹೇಳಿದ್ದೆ’ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸಮ್ಮಿಶ್ರ ಸರ್ಕಾರ ಇರುವುದಿಲ್ಲ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದೇನೆ. ಸಿಎಂ ಎಂದರೆ ಸರ್ಕಾರವೇ ಹೊರತು ಇಲ್ಲಿ ವ್ಯಕ್ತಿಗತವಾಗಿ ತೆಗೆದುಕೊಳ್ಳಬಾರದು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಈ ಚುನಾವಣೆಯಲ್ಲಿಎರಡಂಕಿ ದಾಟುವುದಿಲ್ಲ. ಮೇಲ್ನೋಟಕ್ಕೆ ಎರಡೂ ಪಕ್ಷಗಳು ಚುನಾವಣಾ ಪೂರ್ವ ಸ್ಥಾನ ಹೊಂದಾಣಿಕೆ ಮಾಡಿಕೊಂಡಿದ್ದರೂ ಆಂತರಿಕ ಜಗಳ ಬೀದಿಗೆ ಬಿದ್ದಿದೆ. ಬಹುತೇಕ ಕಡೆಗಳಲ್ಲಿ ಅಭ್ಯರ್ಥಿಗಳೇ
ಇಲ್ಲದೇ ಪರದಾಡಿವೆ. ಮೈಸೂರಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಜೆಡಿಎಸ್
ಬೆಂಬಲಿಸುತ್ತಿಲ್ಲ, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಾಂಗ್ರೆಸ್
ಬೆಂಬಲಿಸುತ್ತಿಲ್ಲ. ಹಾಸನ, ತುಮಕೂರು ಕಥೆ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ತಮ್ಮ ಈ ದೌರ್ಬಲ್ಯ ಮುಚ್ಚಿಕೊಳ್ಳಲು ಪರಸ್ಪರ ಕೀಳು
ಮಟ್ಟದ ಟೀಕೆಯಲ್ಲಿ ತೊಡಗಿವೆ ಎಂದರು.