Advertisement
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ಸರಕಾರಿ ವ್ಯಾಜ್ಯ ನಿರ್ವಹಣ ಅಧಿನಿಯಮ -2023ರ ಸಭೆಯಲ್ಲಿ ಮಾತನಾಡಿದರು.
Related Articles
Advertisement
ರಾಜಿ-ಸಂಧಾನ ಪ್ರಕರಣಗಳಿಗೆ ಸಂಬಂಧಿಸಿ ಸರಕಾರದ ಉನ್ನತ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ಸೇರಿ 15 ದಿನಗಳಲ್ಲಿ ಮಾರ್ಗದರ್ಶಿ ಸೂತ್ರ ಅನುಸರಿಸಲಾಗುವುದು, ರಾಜ್ಯದ ಜಿಲ್ಲಾ, ತಾಲೂಕು ಮತ್ತು ಇತರ ನ್ಯಾಯಾಲಯಗಳಲ್ಲಿ ಹೈಕೋರ್ಟ್‌ವರೆಗೆ ಪ್ರಸ್ತುತ 21.4 ಲಕ್ಷ ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಕೆಳ ಹಂತದ ನ್ಯಾಯಾಲಯದಲ್ಲಿ 18.9 ಲಕ್ಷ ಪ್ರಕರಣಗಳಿದ್ದರೆ, 2.50 ಲಕ್ಷ ಪ್ರಕರಣಗಳು ಹೈಕೋರ್ಟ್‌ನಲ್ಲಿವೆ. 1,626 ಪ್ರಕರಣಗಳು 20 ರಿಂದ 30 ವರ್ಷ ಹಳೆಯದ್ದಾಗಿದ್ದರೆ, 30 ವರ್ಷಕ್ಕಿಂತ ಹೆಚ್ಚು ಹಳೆಯ ಪ್ರಕರಣಗಳು 172 ಇವೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸಭೆಯಲ್ಲಿ ಉಪಸ್ಥಿತರಿದ್ದರು. ಸರಕಾರಕ್ಕೆ ಸೋಲು
ಐದಾರು ವರ್ಷಗಳಲ್ಲಿ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಶೇ.75ರಷ್ಟು ಪ್ರಕರಣಗಳಲ್ಲಿ ಸರಕಾರದ ವಿರುದ್ಧ ಆದೇಶಗಳಾಗಿವೆ. ಕ್ರಿಮಿನಲ್ ಪ್ರಕರಣಗಳಲ್ಲಿ ಶೇ. 95ಕ್ಕಿಂತಲೂ ಹೆಚ್ಚು ಪ್ರಕರಣಗಳಲ್ಲಿ ಸರಕಾರ ಸೋಲು ಅನುಭವಿಸಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಿಲ್ಲ. ಸರಕಾರಿ ಮೇಲ್ಮನವಿಗಳಸಂಖ್ಯೆ ಗಣನೀಯವಾಗಿ ಹೆಚ್ಚಳಗೊಂಡು ವೆಚ್ಚ ಹೆಚ್ಚಾಗಿದೆ. ಇದನ್ನು ಗಮನಿಸಿ ರಾಜ್ಯದ ನ್ಯಾಯಾಲಯಗಳು ಮತ್ತು ಶಾಸನಬದ್ಧ ನ್ಯಾಯಾಧಿಕರಣಗಳ ಮುಂದೆ ಸರಕಾರಿ ವ್ಯಾಜ್ಯಗಳು ನಡೆಸುವ ಕುರಿತಂತೆ ನಿಯಮಗಳು, ಆದೇಶಗಳು, ಅಧಿಸೂಚನೆಗಳು, ಸುತ್ತೋಲೆಗಳು ಮುಂತಾದ ದಿಕ್ಸೂಚಿ ರಹಿತ ನಿರ್ದೇಶನಗಳನ್ನು ಈ ಕಾನೂನಿನ ಮೂಲಕ ಬದಲಾಯಿಸಲಾಗಿದೆ.