Advertisement

ಸಂವಿಧಾನ ನೀಡಿರುವ ಶ್ರೇಷ್ಠ ಹಕ್ಕು ಮತದಾನ

06:27 PM Jan 26, 2021 | Team Udayavani |

ರಾಯಚೂರು: ಭಾರತ ಸಂವಿಧಾನ ದೇಶದ ಪ್ರಜೆಗಳಿಗೆ ನೀಡಿರುವ ಶ್ರೇಷ್ಠ ಹಕ್ಕುಗಳಲ್ಲಿ ಮತದಾನವೂ ಒಂದು. ಅದನ್ನು ನಿರ್ಭೀತಿ, ನಿಷ್ಪಕ್ಷಪಾತವಾಗಿ ಚಲಾಯಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶರಾದ ಮಲ್ಲಿಕಾರ್ಜುನ ಗೌಡ ಹೇಳಿದರು. ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

Advertisement

ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಎಲ್ಲರೂ ತಪ್ಪದೇ ತಮ್ಮ ಹಕ್ಕು ಚಲಾಯಿಸಬೇಕು. ಅದಕ್ಕಾಗಿ 18 ವರ್ಷ ತುಂಬಿದ ಯುವಕರು ಮತದಾರರ ಪಟ್ಟಿಯಲ್ಲಿ ತಪ್ಪದೇ ಹೆಸರು ನೋಂದಾಯಿಸಬೇಕು. 2011ರ ಜ.25ರಿಂದ ದೇಶದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ. ಮತದಾನದ ದಿನದಂದು ರಜೆ ಇದ್ದಾಗ್ಯೂ ಮತದಾನದಿಂದ ಹಿಂದೆ ಸರಿಯುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಡಿಸಿ ಆರ್‌. ವೆಂಕಟೇಶ ಕುಮಾರ್‌ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಚುನಾವಣೆಗಳಲ್ಲಿ ಶೇಕಡಾವಾರು ಪ್ರಮಾಣದಲ್ಲಿ ಮತದಾನ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ತಪ್ಪದೇ ಮತದಾನದ ಹಬ್ಬದಲ್ಲಿ ಪಾಲ್ಗೊಳ್ಳಬೇಕು. ಆಗಲೇ ಸಮರ್ಥ ನಾಯಕರು ಹೊರಬರಲು ಸಾಧ್ಯ ಎಂದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ  ಚುನಾವಣೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಅಧಿ ಕಾರಿಗಳನ್ನು ಸನ್ಮಾನಿಸಲಾಯಿತು. ಈ ವೇಳೆ ಜಿಪಂ ಸಿಇಒ ಶೇಖ್‌ ತನ್ವೀರ್‌ ಆಸಿಫ್‌, ಎಡಿಸಿ ದುರಗೇಶ, ಎಸಿ ಸಂತೋಷ ಕಾಮಗೌಡ, ತಹಶೀಲ್ದಾರ್‌ ಡಾ| ಹಂಪಣ್ಣ ಸಜ್ಜನ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next